ಬೆಂಗಳೂರು: ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಆಗಿದ್ದ ನವೀನ್ ಎಂಬುವರನ್ನು ಸೋಮವಾರ ಬಂಧಿಸಲಾಗಿದೆ. ಅಕ್ರಮ ಪ್ರಕರಣದಲ್ಲಿ ನವೀನ್ ಪಾತ್ರಕ್ಕೆ ಸಂಬಂಧಿಸಿದಂತೆ ತನಿಖಾ ತಂಡಕ್ಕೆ ದಾಖಲೆಗಳು ಲಭಿಸಿದ ಬಳಿಕ ನಾಪತ್ತೆಯಾಗಿದ್ದ.
ಕಳೆದ ಮೇ ತಿಂಗಳಿಂದ ನವೀನ್‌ಗಾಗಿ ಸಿಐಡಿ ತಂಡವು ಹುಡುಕಾಟ ನಡೆಸುತ್ತಿತ್ತು. ಪದೇ ಪದೇ ಫೋನ್ ನಂಬರ್ ಬದಲಾವಣೆ ಮಾಡುತ್ತಿದ್ದ ಕಾರಣಕ್ಕೆ ಬಂಧನ ಸಾಧ್ಯವಾಗಿರಲಿಲ್ಲ. ಸೋಮವಾರ ನಂದಿನಿ ಲೇಔಟ್‌ನ ಮನೆಯೊಂದರಲ್ಲಿ ಬಂಧಿಸಲಾಗಿದೆ. ಈತ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ ಎಂದು ಸಿಐಡಿ ಮೂಲಗಳು ತಿಳಿಸಿವೆ.
ಸಿಐಡಿ ಡಿವೈಎಸ್ಪಿ ಅಂಜುಮಾಲಾ ಟಿ.ನಾಯಕ್, ಪತ್ತೆದಳದ ವಿಭಾಗದ ಸಬ್‌ಇನ್‌ಸ್ಪೆಕ್ಟರ್‌ಗಳಾದ ಅಭಿಜಿತ್ ಆದಿತ್ಯ ಹಾಗೂ ಶ್ರೀಕಾಂತ್ ನೇತೃತ್ವದ ತಂಡವು ಆರೋಪಿಯನ್ನು ಬಂಧಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.