ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ಅಕ್ರಮ: ದಢೇಸೂಗುರು ಹಾಜರು, ಯತ್ನಾಳ ಗೈರು

Published 27 ಡಿಸೆಂಬರ್ 2023, 18:29 IST
Last Updated 27 ಡಿಸೆಂಬರ್ 2023, 18:29 IST
ಅಕ್ಷರ ಗಾತ್ರ

ಬೆಂಗಳೂರು: ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್ (ಪಿಎಸ್‌ಐ) 545 ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದ ವಿಚಾರಣೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ಏಕಸದಸ್ಯ ಆಯೋಗವು ಬುಧವಾರ ಕೆಲವರ ಹೇಳಿಕೆ ದಾಖಲಿಸಿಕೊಂಡಿತು. ಕೆಲವರು ಖುದ್ದು ವಿಚಾರಣೆಗೆ ಹಾಜರಾದರೆ, ಕೆಲವರು ವಕೀಲರ ಮೂಲಕ ಮಾಹಿತಿ ಕಳುಹಿಸಿದ್ದರು.

ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ಶಾಸಕರಾದ ಸಿ.ಎನ್‌.ಅಶ್ವತ್ಥನಾರಾಯಣ, ಬಸನಗೌಡ ಪಾಟೀಲ ಯತ್ನಾಳ, ಮಾಜಿ ಶಾಸಕ ಬಸವರಾಜ ದಢೇಸೂಗುರು ಅವರಿಗೆ ಆಯೋಗ ಸಮನ್ಸ್‌ ಜಾರಿ ಮಾಡಿತ್ತು. ಹಗರಣದ ದಾಖಲೆಗಳಿರುವ ಬಗ್ಗೆ ಹೇಳಿಕೆ ನೀಡಿದ್ದವರಿಗೆ ನೋಟಿಸ್‌ ಜಾರಿ ಮಾಡಲಾಗಿತ್ತು.

ವಿಚಾರಣೆಗೆ ಹಾಜರಾಗದ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಆಯೋಗ ಎರಡನೇ ಸಮನ್ಸ್‌ ಜಾರಿ ಮಾಡಿದೆ. ಕುಮಾರಸ್ವಾಮಿ ಹಾಗೂ ಅಶ್ವತ್ಥನಾರಾಯಣ ಅವರ ಪರವಾಗಿ ವಕೀಲರು ಹಾಜರಾಗಿ ಲಿಖಿತ ಹೇಳಿಕೆ ಸಲ್ಲಿಸಿದರು.

ಪಿಎಸ್‌ಐ ಅಕ್ರಮ ಪ್ರಕರಣದ ಕುರಿತು ಹೇಳಿಕೆ ನೀಡಿದ್ದ ದಢೇಸೂಗುರು ಅವರು ಖುದ್ದು ಹಾಜರಾಗಿ ಹೇಳಿಕೆ ನೀಡಿದರು. ದಢೇಸೂಗುರು ಅಕ್ರಮದಲ್ಲಿ ಭಾಗಿಯಾದ ಬಗ್ಗೆ ವಿಡಿಯೊಗಳು ಹರಿದಾಡಿದ್ದವು. ಇದುವರೆಗೂ ಒಬ್ಬ ಆರೋಪಿ ಸೇರಿದಂತೆ ಹಲವರ ಹೇಳಿಕೆಗಳನ್ನು ಆಯೋಗ ದಾಖಲಿಸಿಕೊಂಡಿದೆ.

ಸುದ್ದಿಗಾರರ ಜತೆಗೆ ಮಾತನಾಡಿದ ಬಸವರಾಜ ದಢೇಸೂಗುರು, ‘ನನ್ನ ವಿರುದ್ಧ ಕೇಳಿಬಂದಿದ್ದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತಡೆಯಾಜ್ಞೆಯಿದೆ. ಆದರೂ ಸಮನ್ಸ್ ನೀಡಲಾಗಿದೆ. ಇದು ರಾಜಕಾರಣದ ಕುತಂತ್ರ. ಎಲ್ಲರ ಸಮಯ ವ್ಯರ್ಥ ಮಾಡುವ ಪ್ರಯತ್ನವಿದು’ ಎಂದು ಕಿಡಿಕಾರಿದರು.

‘ಹಗರಣಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳು ಕಾನೂನು ಬದ್ಧವಾಗಿಲ್ಲ. ಕಳೆದ ಚುನಾವಣೆಯಲ್ಲಿ ಸುಮ್ಮನೆ ಆರೋಪ ಹೊರಿಸಿ ನನ್ನನ್ನು ಸೋಲಿಸಲು ಹುನ್ನಾರ ನಡೆಸಲಾಗಿತ್ತು’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT