ಬೆಂಗಳೂರು: ಪರಿಶಿಷ್ಟರ ಜಮೀನುಗಳ ಅಕ್ರಮ ಪರಭಾರೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸುವುದಕ್ಕೆ ಕಾಲಮಿತಿಯನ್ನು ತೆಗೆದುಹಾಕುವ ಕರ್ನಾಟಕ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) (ಕೆಲವು ಭೂಮಿಗಳ ವರ್ಗಾವಣೆ ನಿಷೇಧ– ಪಿಟಿಸಿಎಲ್) (ತಿದ್ದುಪಡಿ) ಮಸೂದೆ–2023ಕ್ಕೆ ವಿಧಾನಸಭೆ ಗುರುವಾರ ಒಪ್ಪಿಗೆ ನೀಡಿತು.
‘1978ರಿಂದ ಈ ಕಾಯ್ದೆ ಜಾರಿಯಲ್ಲಿದೆ. ಆದರೆ, 2017ರಲ್ಲಿ ಪ್ರಕರಣವೊಂದರಲ್ಲಿ ತೀರ್ಪು ನೀಡಿದ ಸುಪ್ರೀಂ ಕೋರ್ಟ್, ಕಾಯ್ದೆಯಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಕಾಲಮಿತಿ ಕುರಿತು ಸ್ಪಷ್ಟತೆ ಇಲ್ಲದ ಕಾರಣ ಗೊಂದಲವಿದೆ ಎಂದು ಹೇಳಿತ್ತು. ಅದರ ಆಧಾರದಲ್ಲೇ ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಬಹುತೇಕ ಪ್ರಕರಣಗಳು ವಜಾಗೊಂಡಿದ್ದವು. ಪರಿಶಿಷ್ಟರಿಗೆ ಅನ್ಯಾಯ ಆಗುವುದನ್ನು ತಪ್ಪಿಸಲು ತಿದ್ದುಪಡಿ ತರಲಾಗುತ್ತಿದೆ’ ಎಂದರು.
‘ಯಾವುದೇ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ ಪಿಟಿಸಿಎಲ್ ಕಾಯ್ದೆಯಡಿ ಅರ್ಜಿ ಸಲ್ಲಿಸಲು ಯಾವುದೇ ಕಾಲಮಿತಿ ಇರುವುದಿಲ್ಲ. ಈ ಸಂಬಂಧದ ಮೊಕದ್ದಮೆಗಳನ್ನು ನ್ಯಾಯ ನಿರ್ಣಯ ಮಾಡುವ ಎಲ್ಲ ಸಕ್ಷಮ ಪ್ರಾಧಿಕಾರಗಳು ಮತ್ತು ಎಲ್ಲ ನ್ಯಾಯಾಲಯಗಳಿಗೂ ಈ ತಿದ್ದುಪಡಿ ಅನ್ವಯವಾಗುತ್ತದೆ’ ಎಂಬ ಅಂಶ ತಿದ್ದುಪಡಿಯಲ್ಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.