ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಟಿಸಿಎಲ್ ಹೋರಾಟ 13ನೇ ದಿನಕ್ಕೆ

Last Updated 14 ಜನವರಿ 2023, 19:53 IST
ಅಕ್ಷರ ಗಾತ್ರ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆಯ(ಪಿಟಿಸಿಎಲ್‌) ಸಮಗ್ರ ತಿದ್ದುಪಡಿಗೆ ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ 13ನೇ ದಿನವೂ ಮುಂದುವರಿದಿದೆ.

ಸಂಕ್ರಾಂತಿ ಹಬ್ಬವನ್ನೂ ತೊರೆದು ಸಂತ್ರಸ್ತರು ಹೋರಾಟ ಮುಂದುವರಿಸಿದ್ದಾರೆ. ಸಾಹಿತಿ ಬರಗೂರು ರಾಮಚಂದ್ರಪ್ಪ ಮತ್ತು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಅವರು ಶನಿವಾರ ಧರಣಿಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.

‘ಬಲಾಢ್ಯರ ಕೈಗೆ ದುರ್ಬಲರ ಭೂಮಿ ಹೋಗಬಾರದು ಎಂಬ ಕಾರಣಕ್ಕೆ ಕಾನೂನು ತರಲಾಗಿದೆ. ಅದರಲ್ಲಿರುವ ತೊಡಕುಗಳನ್ನು ನಿವಾರಿಸದಿದ್ದರೆ ದಲಿತರು ಭೂರಹಿತರಾಗಲಿದ್ದಾರೆ’ ಎಂದು ಆಯನೂರು ಮಂಜುನಾಥ್ ಹೇಳಿದರು.

‘ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದರೆ ದಲಿತರ ಭೂಮಿ ಉಳಿಯಲಿದೆ. ಈ ವಿಷಯವನ್ನು ಸರ್ಕಾರದ ಗಮನಕ್ಕೆ ತಂದು ಒತ್ತಡ ಹೇರಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT