ಶುಕ್ರವಾರ, ಡಿಸೆಂಬರ್ 9, 2022
21 °C

ಪಿಟಿಸಿಎಲ್‌: ಅಹೋರಾತ್ರಿ ಧರಣಿ ವಾಪಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆಯ (ಪಿಟಿಸಿಎಲ್‌) ಸಮಗ್ರ ತಿದ್ದುಪಡಿಗೆ ಆಗ್ರಹಿಸಿ ಸಂರಕ್ಷಣಾ ಮಹಾ ಒಕ್ಕೂಟ ನಡೆಸುತ್ತಿದ್ದ ಅಹೋರಾತ್ರಿ ಧರಣಿಯನ್ನು ಶುಕ್ರವಾರ ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದಿದೆ.

ಸ್ವಾತಂತ್ರ್ಯ ಉದ್ಯಾನದಲ್ಲಿ 25 ದಿನಗಳಿಂದ ಧರಣಿ ನಡೆಸಿದ ಒಕ್ಕೂಟದ ಸದಸ್ಯರು ಶುಕ್ರವಾರ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ಬಳಿಗೆ ತೆರಳಿ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಹೋರಾಟಗಾರರನ್ನು ಕರೆದು ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ’ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಕಾನೂನಿನ ತೊಡಕುಗಳಿದ್ದು, ಸರಿಪಡಿಸಿ ತಿದ್ದುಪಡಿ ತರಲಾಗುವುದು. ಧರಣಿ ವಾಪಸ್ ಪಡೆಯಿರಿ‘ ಎಂದು ಮನವಿ ಮಾಡಿದರು.

ಅಹೋರಾತ್ರಿ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಾಗಿದೆ. ಒಂದು ತಿಂಗಳಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು ದಲಿತರ ಭೂಮಿ ಹಕ್ಕನ್ನು ರಕ್ಷಣೆ ಮಾಡದಿದ್ದರೆ ಮತ್ತೆ ಹೋರಾಟ ಆರಂಭಿಸಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.