ಸೋಮವಾರ, ಫೆಬ್ರವರಿ 17, 2020
15 °C
ದ್ವಿತೀಯ ಪಿಯು ಪರೀಕ್ಷೆ

ಅಧೀಕ್ಷಕರಿಗೆ ಬೇಸಿಕ್ ಮೊಬೈಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ದ್ವಿತೀಯ ಪಿಯು ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ನಡೆಸುವುದಕ್ಕಾಗಿ ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರು ಮಾತ್ರವೇ ಒಂದು ಬೇಸಿಕ್ ಮೊಬೈಲ್ ಸೆಟ್ ಬಳಸಲು ಅವಕಾಶವಿದ್ದು, ಇತರರಿಗೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್‌ ಹೇಳಿದರು.

ಬುಧವಾರ ಇಲ್ಲಿನ ಶ್ರೀ ರೇಣುಕಾಚಾರ್ಯ ಕಾನೂನು ಕಾಲೇಜಿನಲ್ಲಿ ಬೆಂಗಳೂರು ವಿಭಾಗದ ಪಿಯು ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಮತ್ತು ಸೂಪರಿಟೆಂಡೆಂಟ್‌ಗಳ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ಈ ಬಾರಿ ರಾಜ್ಯಮಟ್ಟದಲ್ಲಿ ವಿಶೇಷ ವಿಚಕ್ಷಣೆಯೊಂದಿಗೆ ಜಿಲ್ಲಾ ಮಟ್ಟದಲ್ಲೂ ನಿಯಂತ್ರಣ ಕೊಠಡಿಗಳಲ್ಲಿ ಸಿಸಿ ಟಿವಿ ಮೂಲಕ 24 ಗಂಟೆಯೂ ನಿರಂತರವಾಗಿ ನಿಗಾವಹಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.

‘ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಸೇರಿದಂತೆ ಪರೀಕ್ಷಾ ಕೆಲಸಗಳಲ್ಲಿ ತೊಡಗಿದವರಿಗೆ ಪರೀಕ್ಷಾ ಗುರುತಿನ ಚೀಟಿ ನೀಡಲಾಗುತ್ತದೆ. ಗುರುತಿನ ಚೀಟಿ ಇಲ್ಲದವರಿಗೆ ಪರೀಕ್ಷಾ ಕೇಂದ್ರದೊಳಗೆ ಇಲ್ಲವೇ ಪರೀಕ್ಷಾ ಕೇಂದ್ರದ ಸುತ್ತಮುತ್ತ ಓಡಾಟಕ್ಕೆ ಅವಕಾಶ ಇಲ್ಲ’ ಎಂದು ಸಚಿವರು ಹೇಳಿದರು.

‘ವಿಶೇಷ ರಕ್ಷಣಾ ಲಕ್ಷಣಗಳು ಇರುವ 40 ಪುಟಗಳ ಉತ್ತರ ಪತ್ರಿಕೆಗಳನ್ನು ಈಗಾಗಲೇ ಸರಬರಾಜು ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಸಾಮಗ್ರಿ ರವಾನೆ ಮತ್ತು ಪರೀಕ್ಷಾ ಕೇಂದ್ರಗಳಿಂದ ಸಂಬಂಧಿಸಿದ ಮೌಲ್ಯಮಾಪನ ಕೇಂದ್ರಕ್ಕೆ ಉತ್ತರಪತ್ರಿಕೆ ರವಾನೆಯ ವಾಹನಗಳ ಚಲನವಲನಗಳ ಮೇಲೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗುವ ವಿಚಕ್ಷಣಾ ಕೇಂದ್ರದಿಂದಲೇ ವೀಕ್ಷಣೆ ಹಾಗೂ ನಿಯಂತ್ರಣ ಮಾಡಲಾಗುತ್ತದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)