ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೀಕ್ಷಾ’ ಆ್ಯಪ್‌ನಲ್ಲಿ ಪಿಯು ‘ಪರೀಕ್ಷಾ ಅಭ್ಯಾಸ’

Last Updated 25 ಮೇ 2021, 21:25 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ ರೂಪಿಸಿದ ‘ಪರೀಕ್ಷಾ ಅಭ್ಯಾಸ’ ಕಾರ್ಯಕ್ರಮ ಇನ್ನು ಮುಂದೆ ಕೇಂದ್ರ ಸರ್ಕಾರದ ‘ದೀಕ್ಷಾ’ ಆ್ಯಪ್‌ನಲ್ಲಿ ಲಭ್ಯವಾಗಲಿದೆ.

ಆ್ಯಪ್‌ಗೆ ಅಳವಡಿಸಿದ ಪರೀಕ್ಷಾ ಅಭ್ಯಾಸ ಕಾರ್ಯಕ್ರಮವನ್ನು ಮಂಗಳವಾರ ಬಿಡುಗಡೆ ಮಾಡಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ‘ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗೆ ಆತ್ಮವಿಶ್ವಾಸದಿಂದ ಸಿದ್ಧರಾಗಲು ಈ ಆ್ಯಪ್‌ ಸಹಕಾರಿ ಆಗಲಿದೆ’ ಎಂದರು.

‘ಇದೇ ರೀತಿಯಲ್ಲಿ 10ನೇ ತರಗತಿಯ ಮಕ್ಕಳಿಗೆ ಪರೀಕ್ಷಾ ಸಿದ್ಧತೆಗೆ ಡಿಎಸ್‌ಇಆರ್‌ಟಿ ರೂಪಿಸಿರುವ ‘ಫೋಕಸ್’ ಎಂಬ ಪುನರ್ಮನನ ಕಾರ್ಯಕ್ರಮ ಕೂಡಾ ದೀಕ್ಷಾದಲ್ಲಿ ಪ್ರಸ್ತುತಪಡಿಸಲಾಗಿದೆ. ಪ್ರತಿಯೊಂದು ವಿಷಯಕ್ಕೆ ಇ- ಪಠ್ಯಪುಸ್ತಕ, ಕನಿಷ್ಠ ಎರಡು ಮಾದರಿ ಪ್ರಶ್ನೆಪತ್ರಿಕೆಗಳು, ವಿವರಾಣಾತ್ಮಕ ವಿಡಿಯೊಗಳು, ಅಧ್ಯಾಯವಾರು ಅಭ್ಯಾಸ ಪ್ರಶ್ನೋತ್ತರಗಳು ಅದರಲ್ಲಿ ಸಿಗಲಿವೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವುದಕ್ಕೆ ಸಹಾಯ ಮಾಡಲು ಪಿಸಿಎಂಬಿ ವಿಷಯಕ್ಕೆ ಸುಮಾರು ಒಂಬತ್ತು ಸಾವಿರ ಬಹುಆಯ್ಕೆ ಪ್ರಶ್ನೆಗಳನ್ನು ಅಧ್ಯಾಯವಾರು ಒದಗಿಸಲಾಗಿದೆ’ ಎಂದರು.

ಏನಿದು ದೀಕ್ಷಾ ಆ್ಯಪ್ ಪ್ರೋಗ್ರಾಂ: ದೀಕ್ಷಾ ಪೋರ್ಟಲ್ ಅನ್ನು https://diksha.gov.in/ ಇಲ್ಲಿ ನೋಡಬಹುದು. ಆಂಡ್ರಾಯಿಡ್ ಫೋನ್‌ಗಳಲ್ಲಿ ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಈ ಲಿಂಕ್ (http://bit.ly/KA-diksha) ಒತ್ತಿ ದೀಕ್ಷಾ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಬಳಿಕ ಆ್ಯಪ್‌ ಅಥವಾ ಪೋರ್ಟಲ್‌ನಲ್ಲಿ ಬೇಕಿರುವ ಮಂಡಳಿ, ಮಾಧ್ಯಮ, ಭಾಷೆ ಮತ್ತು ತರಗತಿಗಳನ್ನು ಆಯ್ಕೆ ಮಾಡಬೇಕು. 1ರಿಂದ 12ನೇ ತರಗತಿಗಳಿಗೆ ಪಠ್ಯಾಂಶಗಳು, ಅಂದರೆ ಇ-ಪಠ್ಯಪುಸ್ತಕಗಳು (ಇಟಿಬಿ), ವಿವರಣಾತ್ಮಕ ಪಠ್ಯಾಂಶಗಳು, ಕಲಿಕಾ ಸಂಪನ್ಮೂಲಗಳು, ಅಭ್ಯಾಸ ಪ್ರಶ್ನೆಗಳು, ಪ್ರಶ್ನೆ ಕೋಶ ಮತ್ತು ಶಿಕ್ಷಕರಿಗೆ ಪಾಠ ಯೋಜನೆ ಇನ್ನಿತರ ಸಂಪನ್ಮೂಲಗಳನ್ನು ಈ ಪೋರ್ಟಲ್‌ನಲ್ಲಿ ಅಳವಡಿಸಲಾಗಿದೆ.

10ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧರಾಗುವುದಕ್ಕೆ ಸಹಾಯವಾಗಲೆಂದು ವಿಜ್ಞಾನ, ಗಣಿತ ಮತ್ತು ಇಂಗ್ಲಿಷ್ ವಿಷಯಗಳ ಪ್ರತಿ ಅಧ್ಯಾಯಕ್ಕೆ ಸುಮಾರು 30 ಪ್ರಶ್ನೆಗಳನ್ನು ಸೇರಿಸಲಾಗಿದೆ. ದ್ವಿತೀಯ ಪಿಯುಸಿಯ ಪಿಸಿಎಂಬಿ ವಿಷಯಗಳಿಗೆ, ಪ್ರತಿ ಅಧ್ಯಾಯಕ್ಕೂ 80ರಿಂದ 100 ಪ್ರಶ್ನೆಗಳನ್ನು ಅಪ್ಲೋಡ್ ಮಾಡಲಾಗಿದೆ. ಪಠ್ಯಾಂಶಗಳನ್ನು ‘ದೀಕ್ಷಾ’ ಪೋರ್ಟಲ್‌ಗೆ ಅಪ್ಲೋಡ್ ಮಾಡಲು ಆರ್.ವಿ. ಎಂಜಿನಿಯರಿಂಗ್ ಕಾಲೇಜಿನ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಸಹಾಯ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT