ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ 20ರಂದು ನೇಮಕಾತಿ ಆದೇಶ: ಎಸ್.ಸುರೇಶ್ ಕುಮಾರ್

ಕಾಲೇಜುಗಳು ಆರಂಭವಾದ ದಿನದಿಂದ ನೇಮಕಾತಿ ಆದೇಶ ಜಾರಿಗೆ
Last Updated 17 ನವೆಂಬರ್ 2020, 20:50 IST
ಅಕ್ಷರ ಗಾತ್ರ

ಬೆಂಗಳೂರು: ‘ಕೌನ್ಸೆಲಿಂಗ್ ಮೂಲಕ ಈಗಾಗಲೇ ಸ್ಥಳ ನಿಯುಕ್ತಿಗೊಂಡಿರುವ ನೂತನ ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ ಇದೇ 20ರಿಂದ ನೇಮಕಾತಿ ಆದೇಶ ನೀಡಲಾಗುವುದು. ಮುಖ್ಯಮಂತ್ರಿ ಅವರೇ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ಅವರು, ‘ಕಾಲೇಜುಗಳು ಆರಂಭವಾದ ದಿನ
ದಿಂದ ನೇಮಕಾತಿ ಆದೇಶ ಜಾರಿಗೆ ಬರಲಿದ್ದು, ಅದಕ್ಕೂ ಮೊದಲು ನೂತನ ಉಪನ್ಯಾಸಕರಿಗೆ ಇಲಾಖೆಯ ನಿಯಮ
ಗಳು, ಆಡಳಿತ, ವೃಂದ ಮತ್ತು ನೇಮಕಾತಿ ನಿಯಮಗಳು, ಉಪನ್ಯಾಸಕರ ವೃತ್ತಿ ಧರ್ಮ, ವೃತ್ತಿ ಗೌರವ ಸೇರಿದಂತೆ ಪ್ರೇರಣಾದಾಯಕ ತರಬೇತಿ ಕಾರ್ಯಾಗಾರವನ್ನು ಜಿಲ್ಲೆಗಳಲ್ಲಿ ಇಲ್ಲವೇ ಆಯಾ ವಿಭಾಗಗಳಲ್ಲಿ ನಡೆಸಲಾಗುವುದು’ ಎಂದರು.

‘ಕೋವಿಡ್‍ನಿಂದಾಗಿ ಆರ್ಥಿಕ ಇಲಾಖೆ ಮತ್ತು ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಗಳ ಆರ್ಥಿಕ ಮಿತವ್ಯಯ ಆದೇಶವಿದ್ದುದರಿಂದ ಹಾಗೂ ಶಾಲಾ ಕಾಲೇಜುಗಳ ಆರಂಭ ಕುರಿತು ಅನಿಶ್ಚಿತತೆಯ ಕಾರಣ ನೇಮಕಾತಿಆದೇಶ ನೀಡಿರಲಿಲ್ಲ. ಈಗ ಸ್ಥಳ ನಿಯುಕ್ತಿಗೆ ಅವಕಾಶ ನೀಡಲಾಗಿದೆ’ ಎಂದರು.

23 ರಿಂದ ವರ್ಗಾವಣಾ ಪ್ರಕ್ರಿಯೆ:‘ಪಿಯು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಇದೇ 23 ರಿಂದ ಆರಂಭ
ವಾಗಲಿದ್ದು, ಅಂದಿನಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶವಾಗಲಿದೆ’ ಎಂದು ಸುರೇಶ್‌ ಕುಮಾರ್‌ ತಿಳಿಸಿದರು.

ಕಲ್ಯಾಣ ಕರ್ನಾಟಕದ ಶಿಕ್ಷಕ ಹುದ್ದೆ ಭರ್ತಿ

ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಪ್ರದೇಶದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಆದ್ಯತೆಮೇರೆಗೆ ಭರ್ತಿ ಮಾಡಲು ಸಚಿವ ಸುರೇಶ್‌ಕುಮಾರ್‌ ಅಧಿಕಾರಿಗಳಿಗೆ ಸೂಚನೆನೀಡಿದರು. ‘ಇತ್ತೀಚೆಗಷ್ಟೇ ಇಲಾಖೆಯು ಶಿಕ್ಷಕರಿಗೆ ಅರ್ಹತಾ ಪರೀಕ್ಷೆ (ಟಿಇಟಿ)ನಡೆಸಿದೆ. ವೃಂದ-ನೇಮಕಾತಿ ನಿಯಮಗಳ ತಿದ್ದುಪಡಿಗೂ ಅವಕಾಶ ಕಲ್ಪಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹೆಚ್ಚು ಖಾಲಿ ಹುದ್ದೆಗಳಿವೆ. ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲು ಪ್ರಸ್ತಾವ ಸಲ್ಲಿಸಿ’ ಎಂದೂ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT