ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದು ಸಾವಿರ ಉಪನ್ಯಾಸಕ ಹುದ್ದೆ ಭರ್ತಿಗೆ ಕ್ರಮ: ಎಸ್. ಸುರೇಶ್ ಕುಮಾರ್ ಭರವಸೆ

ಆರು ತಿಂಗಳಲ್ಲಿ ಕ್ರಮ: ಸಚಿವ ಎಸ್. ಸುರೇಶ್ ಕುಮಾರ್ ಭರವಸೆ
Last Updated 20 ನವೆಂಬರ್ 2020, 20:43 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಂದಿನ ಆರು ತಿಂಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಹೇಳಿದರು.

ಹೊಸದಾಗಿ ನೇಮಕಗೊಂಡಿರುವ ಪಿಯು ಉಪನ್ಯಾಸಕರಿಗೆ ಶುಕ್ರವಾರ ನೇಮಕಾತಿ ಆದೇಶ ವಿತರಿಸಿ ಮಾತನಾಡಿದ ಅವರು, ‘1,203 ಉಪನ್ಯಾಸಕರ ಆಯ್ಕೆಗೆ 2015ರಿಂದಲೇ ನೇಮಕ ಪ್ರಕ್ರಿಯೆ ಪ್ರಾರಂಭಿಸಲಾಗಿತ್ತು. ಆದರೆ, ಅರ್ಜಿ ಆಹ್ವಾನಿಸಿದ್ದು ಬಿಟ್ಟರೆ ಪ್ರಕ್ರಿಯೆ ಮುಂದುವರಿದಿರಲಿಲ್ಲ. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಈ ಪ್ರಕ್ರಿಯೆಗೆ ವೇಗ ಸಿಕ್ಕಿತು’ ಎಂದರು.

‘ರಾಜ್ಯದಲ್ಲಿರುವ 1,231 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 12, 857 ಉಪನ್ಯಾಸಕ ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 10,370 ಉಪನ್ಯಾಸಕರ ಸ್ಥಾನಗಳು ಭರ್ತಿಯಾಗಿದ್ದು, 2,487 ಹುದ್ದೆಗಳು ಖಾಲಿ ಇದ್ದವು. ಈ ಪೈಕಿ, ಈಗ 1,196 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದ್ದು, ಉಳಿದ 1,200ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.

‘ಕಾಲೇಜುಗಳು ಆರಂಭವಾದ ದಿನದಿಂದ ನೇಮಕಾತಿ ಆದೇಶ ಜಾರಿಗೆ ಬರಲಿದೆ. ಅದಕ್ಕೂ ಮುನ್ನ, ನೂತನ ಉಪನ್ಯಾಸಕರಿಗೆ ಇಲಾಖೆಯ ನಿಯಮಗಳು, ಆಡಳಿತ, ವೃಂದ ಮತ್ತು ನೇಮಕಾತಿ ನಿಯಮಗಳು, ವೃತ್ತಿ ಧರ್ಮ ಕುರಿತಂತೆ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.

‘ಸರ್ಕಾರಿ, ಅನುದಾನಿತ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಒಟ್ಟು 12.22 ಲಕ್ಷ ವಿದ್ಯಾರ್ಥಿಗಳ ಹಿತದೃಷ್ಟಿಗೆ ಪೂರಕವಾದ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT