ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಲಕ್ಷ್ಯ: ಪಿಯು ಉಪನ್ಯಾಸಕರ ಪ್ರತಿಭಟನೆ

ಕಪ್ಪು ಪಟ್ಟಿ ಧರಿಸಿ ಕರ್ತವ್ಯ; ಸ್ಪಂದಿಸದಿದ್ದರೆ ಮೌಲ್ಯಮಾಪನ ಬಹಿಷ್ಕಾರ
Last Updated 30 ಜನವರಿ 2020, 20:10 IST
ಅಕ್ಷರ ಗಾತ್ರ

ಬೆಂಗಳೂರು: ‘ಎಂಟು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ನಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ’ ಎಂದು ಆರೋಪಿಸಿ ರಾಜ್ಯದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳ ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ಪಾಲ್ಗೊಂಡಿದ್ದರು. ‘ವೇತನ ತಾರತಮ್ಯ ಸರಿಪಡಿಸಬೇಕು. ಪ್ರಾಂಶುಪಾಲರ ಹುದ್ದೆಗೆ ಮುಂಬಡ್ತಿ ಮೂಲಕ ನೇಮಕಾತಿ ಮಾಡಿಕೊಳ್ಳಬೇಕು. ಉಪನ್ಯಾಸಕರ ಕಾರ್ಯಭಾರ ಕುರಿತು ಸಮಿತಿ ರಚಿಸಬೇಕು’ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

‘ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳ ಇತ್ಯರ್ಥಕ್ಕಾಗಿ 8 ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಆಯಾ ಸರ್ಕಾರಗಳಿಗೂ ಮನವಿ ಸಲ್ಲಿಸಲಾಗಿದ್ದು, ಪರಿಹಾರ ಮಾತ್ರ ಸಿಕ್ಕಿಲ್ಲ’ ಎಂದು ಪ್ರತಿಭಟನಕಾರರು ಅಳಲು ತೋಡಿಕೊಂಡರು.

‘2011ರಲ್ಲಿ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಗಿತ್ತು. ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಪಿಯು ಉಪನ್ಯಾಸಕರ ಹಾಗೂ ಪ್ರಾಂಶುಪಾಲರ ಸಮಸ್ಯೆ ಪರಿಹಾರಕ್ಕಾಗಿ ಅಂದು ಇಲಾಖೆಯ ಕಾರ್ಯದರ್ಶಿಯಾಗಿದ್ದ ಕುಮಾರ್ ನಾಯ್ಕ ನೇತೃತ್ವದಲ್ಲಿ ಸಮಿತಿ ರಚಿಸಿದ್ದರು. ಆ ಸಮಿತಿ ನೀಡಿರುವ ವರದಿಯನ್ನು ಇದುವರೆಗೂ ಜಾರಿಗೆ ತಂದಿಲ್ಲ’ ಎಂದು ದೂರಿದರು.

‘ಸರ್ಕಾರದ ನಿರ್ಲಕ್ಷ್ಯ ವನ್ನು ಖಂಡಿಸಿ ಪ್ರತಿಭಟನೆ ಮುಂದುವರಿಸಲಿದ್ದೇವೆ. ಕೆಲವೇ ದಿನಗಳಲ್ಲಿ ಪಿಯು ಪರೀಕ್ಷೆಗಳು ಬರಲಿದ್ದು, ಕೈಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಲಿದ್ದೇವೆ. ಅದಕ್ಕೂ ಸರ್ಕಾರಸ್ಪಂದಿಸದಿದ್ದರೆ ಅನಿವಾರ್ಯವಾಗಿ ಮೌಲ್ಯಮೌಪನ ಬಹಿಷ್ಕರಿಸಬೇಕಾಗುತ್ತದೆ’ ಎಂದು ಪ್ರತಿಭಟನಕಾರರು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT