ಬೆಂಗಳೂರು: ನಗರದಲ್ಲಿ ವಾಹನಗಳ ಟೋಯಿಂಗ್ ವೇಳೆ ಸಾರ್ವಜನಿಕರು ಹಾಗೂ ಪೊಲೀಸರ ನಡುವೆ ಜಟಾಪಟಿ ನಡೆದಿದ್ದು, ಟೋಯಿಂಗ್ ವಾಹನದ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದೆ.

ಯಲಹಂಕ ನ್ಯೂ ಟೌನ್ ಬಳಿ ಬುಧವಾರ (ಜುಲೈ 28) ಸುತ್ತಾಡಿದ್ದ ಸಂಚಾರ ಪೊಲೀಸರು, ರಸ್ತೆ ಪಕ್ಕ– ಪಕ್ಕದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಟೋಯಿಂಗ್ ಮಾಡಲಾರಂಭಿಸಿದ್ದರು. ಸ್ಥಳದಲ್ಲಿ ಯಾವುದೇ ನೋ ಪಾರ್ಕಿಂಗ್ ಫಲಕವಿರಲಿಲ್ಲ. ಅದನ್ನು ಪ್ರಶ್ನಿಸಿದ್ದ ಸಾರ್ವಜನಿಕರು, ಫಲಕವಿಲ್ಲದ ಜಾಗದಿಂದ ವಾಹನ ಟೋಯಿಂಗ್ ಮಾಡದಂತೆ ಹೇಳಿದ್ದರು.

ಅಷ್ಟಕ್ಕೆ ಕೋಪಗೊಂಡ ಪೊಲೀಸರು ಹಾಗೂ ಟೋಯಿಂಗ್ ಸಿಬ್ಬಂದಿ, ವಾಹನಗಳನ್ನು ಎಳೆದೊಯ್ದು ಟೋಯಿಂಗ್ ವಾಹನದಲ್ಲಿ ಇರಿಸಲು ಮುಂದಾಗಿದ್ದರು. ಅದೇ ಸಂದರ್ಭದಲ್ಲೇ ಜಗಳ ಶುರುವಾಗಿತ್ತು. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಆಕ್ರೋಶಗೊಂಡ ಜನರ ಗುಂಪು, ಟೋಯಿಂಗ್ ವಾಹನ ಏರಿ ಸಿಬ್ಬಂದಿ ಮೇಲೆ ಹೆಲ್ಮೆಟ್ನಿಂದ ಹಲ್ಲೆ ಮಾಡಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘ಸುಖಾಸುಮ್ಮನೇ ಜನರಿಗೆ ಪೊಲೀಸರು ತೊಂದರೆ ನೀಡುತ್ತಿದ್ದಾರೆ. ಫಲಕ ಇಲ್ಲದ ಜಾಗದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಟೋಯಿಂಗ್ ಮಾಡುತ್ತಿದ್ದರು. ಹಲವು ಬಾರಿ ವಿರೋಧಿಸಿದರೂ ಪ್ರಯೋಜನವಾಗಿಲ್ಲ. ಬುಧವಾರ ಟೋಯಿಂಗ್ ಮಾಡಲು ಬಂದಿದ್ದಾಗ ಗಲಾಟೆ ಆಯಿತು’ ಎಂದು ಸ್ಥಳೀಯರೊಬ್ಬರು ಹೇಳಿದರು.

ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಆರೊಪದಡಿ ಮೂವರ ವಿರುದ್ಧ ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಟೋಯಿಂಗ್ ಸಿಬ್ಬಂದಿ ತಪ್ಪು ಮಾಡಿದರೆ ದೂರು ನೀಡಬಹುದಿತ್ತು. ಹಲ್ಲೆ ಮಾಡಿರುವುದು ಅಪರಾಧ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.