ಬೆಂಗಳೂರು: ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು (ಅಂಬೇಡ್ಕರ್ ವಾದ) ನ.26ರಿಂದ 2026ರ ಜನವರಿ 26ರವರೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ವಿರುದ್ಧ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಿದೆ ಎಂದು ಮಾವಳ್ಳಿ ಶಂಕರ್ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶಕ್ಕೆ ಕಂಟಕವಾಗಿರುವ ಆರ್ಎಸ್ಎಸ್ ಭಾರತೀಯರ ಮಿದುಳಿನಲ್ಲಿ ಅಸಮಾನತೆಯ, ವಿಷಪೂರಿತ ವೈದಿಕ ಧರ್ಮದ ಅಮಲನ್ನು ತುಂಬುತ್ತಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತಾರತಮ್ಯ ನೀತಿಯನ್ನು ಅನುಸರಿಸುತ್ತಿದೆ. ದಲಿತ ಸಂಘರ್ಷ ಸಮಿತಿ ಇದರ ವಿರುದ್ಧ ನಿರಂತರವಾಗಿ ಜನರನ್ನು ಎಚ್ಚರಿಸುವ ಕೆಲಸ ಮಾಡುತ್ತಿದೆ’ ಎಂದರು.

ಆರ್ಎಸ್ಎಸ್ನ ಸಂವಿಧಾನ ವಿರೋಧಿ ನೀತಿಯನ್ನು ಖಂಡಿಸಿ, ಪ್ರಬುದ್ಧ ಭಾರತ ನಿರ್ಮಾಣ ಮಾಡುವ ಸಂವಿಧಾನದ ಆಶಯಗಳನ್ನು ಜಾರಿಗೊಳಿಸಲು ಈ ಜನಜಾಗೃತಿ ಅಭಿಯಾನ ಆಯೋಜಿಸಲಾಗುವುದು. ಇದರ ಜೊತೆಗೆ ದಲಿತ ಸಂಘರ್ಷ ಸಮಿತಿಯ ಸದಸ್ಯತ್ವ ನೋಂದಣಿ ಆಂದೋಲವನ್ನು ಪ್ರಾರಂಭಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.