ಬೆಂಗಳೂರು: ಉತ್ತರ ಉಪ ವಿಭಾಗದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗಿದ್ದು, 295 ಮಂದಿಗೆ ದಂಡ ವಿಧಿಸಲಾಗಿದೆ. ಜತೆಗೆ, 40 ಪ್ರಕರಣ ದಾಖಲು ಮಾಡಲಾಗಿದೆ.

13 ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಹಾಗೂ ಶನಿವಾರ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಕಾರ್ಯಾಚರಣೆ ವೇಳೆ ನಿಷೇಧಿತ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿರುವುದು ಹಾಗೂ ಅಂಗಡಿಗಳ ಪ್ರವೇಶ ದ್ವಾರದಲ್ಲಿ ಸಿಗರೇಟು, ಬೀಡಿಗಳ ಜಾಹೀರಾತುಗಳನ್ನು ಕಾನೂನು ಬಾಹಿರವಾಗಿ ಪ್ರಕಟಣೆ ಮಾಡಿರುವುದು ಕಂಡುಬಂತು. ಕೋಟ್ಪಾ ಕಾಯ್ದೆ(ಸಿಗರೇಟ್ ಮತ್ತಿತರ ತಂಬಾಕು ಉತ್ಪನ್ನಗಳ ಕಾಯ್ದೆ) ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು ಮಾಡಲಾಯಿತು ಎಂದು ಪೊಲೀಸರು ಹೇಳಿದರು.

ಉತ್ತರ ವಿಭಾಗದ ಡಿಸಿಪಿ ಬಿ.ಎಸ್.ನೇಮಗೌಡ ಅವರ ನೇತೃತ್ವದಲ್ಲಿ 13 ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.