ಬೆಂಗಳೂರು: ನೇಮಕಾತಿ ಆದೇಶದ ಪ್ರತಿ ನೀಡಬೇಕೆಂದು ಪಟ್ಟುಹಿಡಿದು ಪ್ರತಿಭಟನೆ ನಡೆಸುತ್ತಿರುವ ಉಪನ್ಯಾಸಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಅಹೋರಾತ್ರಿ ಧರಣಿ ಶುಕ್ರವಾರ 6ನೇ ದಿನಕ್ಕೆ ಕಾಲಿಟ್ಟಿದೆ.

ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿಯ ಎದುರು ಒಂದು ವಾರದಿಂದ ನೂರಾರು ಉಪನ್ಯಾಸಕ ಅಭ್ಯರ್ಥಿಗಳು ಮೌನವಾಗಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.

ದಾವಣಗೆರೆ, ರಾಯಚೂರು, ಕೊಪ್ಪಳ, ಕಲಬುರ್ಗಿ ಸೇರಿ ರಾಜ್ಯದ ವಿವಿಧೆಡೆಗಳಿಂದ ಬಂದಿರುವ ಉಪನ್ಯಾಸಕ ಅಭ್ಯರ್ಥಿಗಳು ಹೋರಾಟ ಮುಂದುವರೆಸಿದ್ದಾರೆ. ಈ ಪೈಕಿ, ಕೆಲವು ಮಹಿಳಾ ಅಭ್ಯರ್ಥಿಗಳು ಕಂಕುಳಲ್ಲಿ ಮಗು ಎತ್ತಿಕೊಂಡು ಬಂದಿದ್ದಾರೆ.

ಪ್ರತಿಭಟನೆ ನಿರತ ಅಭ್ಯರ್ಥಿ ಮಮತಾ ಮಾತನಾಡಿ, ‘ಸರ್ಕಾರ ಕೂಡಲೇ ನೇಮಕಾತಿ ಆದೇಶದ ಪ್ರತಿ ನೀಡಬೇಕು’ ಎಂದು ಒತ್ತಾಯಿಸಿದರು.

ಕೆ.ಟಿ. ಶ್ರೀಕಂಠೇಗೌಡ ಭೇಟಿ: ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಕೆ.ಟಿ. ಶ್ರೀಕಂಠೇಗೌಡ ಪ್ರತಿಭಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಉಪನ್ಯಾಸಕ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದರು.

‘ನನ್ನಲ್ಲಿ ಭರವಸೆ ಇಡಿ’

‘ನೇಮಕಾತಿ ಆದೇಶ ನೀಡುವ ಕುರಿತು ನನ್ನ ಮೇಲೆ ನೀವು ಭರವಸೆ ಇಡುವುದಾದರೆ ತಕ್ಷಣವೇ ಹೋರಾಟ ಕೈಬಿಡಿ’ ಎಂದು ಧರಣಿ ನಿರತ ಉಪನ್ಯಾಸಕ ಅಭ್ಯರ್ಥಿಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

ಕ್ವಾರಂಟೈನ್‌ನಲ್ಲಿರುವ ಅವರು ಫೇಸ್‌ಬುಕ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ‘ನೇಮಕಾತಿ ಆದೇಶ ನೀಡಬೇಕೆಂದು ಹಟ ಹಿಡಿದು ಕೂಡುವುದು ಒಳ್ಳೆಯದಲ್ಲ. ಹೋರಾಟ ತಾರ್ಕಿಕವಾಗಿರಬೇಕು. ಎಲ್ಲ ಭರವಸೆಗಳು ದೊರೆತ ನಂತರವೂ ಹಟ ಹಿಡಿಯುವುದು ಹೋರಾಟದ ಅರ್ಥ ಕಳೆದುಕೊಳ್ಳುವ ಹಾಗೆ ಮಾಡುತ್ತದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.