ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ವಿದ್ಯಾರ್ಥಿನಿ ಮೇಲೆ ದೌರ್ಜನ್ಯ: ಪ್ರಾಂಶುಪಾಲ ವಿರುದ್ಧ ಪ್ರಕರಣ

Published 24 ನವೆಂಬರ್ 2023, 23:05 IST
Last Updated 24 ನವೆಂಬರ್ 2023, 23:05 IST
ಅಕ್ಷರ ಗಾತ್ರ

ಬೆಂಗಳೂರು: ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಪ್ರಾಂಶುಪಾಲರೊಬ್ಬರ ವಿರುದ್ಧ ನಗರದ ಕೇಂದ್ರ ವಿಭಾಗದ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿದೆ.

‘ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ 16 ವರ್ಷದ ವಿದ್ಯಾರ್ಥಿನಿಯ ಪೋಷಕರು, ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ನೀಡಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಆರೋಪಿ ಪ್ರಾಂಶುಪಾಲ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ವಿದ್ಯಾರ್ಥಿನಿಗೆ ಆಂತರಿಕ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದಿದ್ದವು. ನ. 22ರಂದು ಸಂತ್ರಸ್ತೆಯನ್ನು ಕೊಠಡಿಗೆ ಕರೆಸಿದ್ದ ಪ್ರಾಂಶುಪಾಲ, ಅಸಭ್ಯವಾಗಿ ವರ್ತಿಸಿದ್ದ. ಹೆದರಿದ್ದ ವಿದ್ಯಾರ್ಥಿನಿ ಕೊಠಡಿಯಿಂದ ಹೊರಗೆ ಓಡಿ ಬಂದಿದ್ದರು. ಅದೇ ವಿಷಯವನ್ನು ಪೋಷಕರಿಗೆ ತಿಳಿಸಿದ್ದಳು’ ಎಂದು ತಿಳಿಸಿದೆ.

‘ಪ್ರಕರಣದ ಸಂಗತಿಗೆ ತಕ್ಕಂತೆ ಪುರಾವೆಗಳನ್ನು ಸಂಗ್ರಹಿಸಲಾಗುತ್ತಿದೆ. ಘಟನಾ ಸ್ಥಳಕ್ಕೂ ಭೇಟಿ ನೀಡಿ ಮಾಹಿತಿ ಪಡೆಯಲಾಗಿದೆ. ಪ್ರಕರಣದಲ್ಲಿ ಕೆಲ ಗೊಂದಲಗಳಿದ್ದು, ಅವುಗಳನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT