ಕೆಎಸ್ಆರ್ಟಿಸಿ: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ
ಪಿಯು ಪೂರಕ ಪರೀಕ್ಷೆ ಇಂದಿನಿಂದ
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಸೋಮವಾರ (ಸೆ. 7) ಆರಂಭವಾಗಲಿದ್ದು, ಇದೇ 19ರವರೆಗೆ ನಡೆಯಲಿದೆ.
ಒಟ್ಟು 305 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಅದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ತಿಳಿಸಿದೆ.
ಪರೀಕ್ಷೆಗೆ ಹಾಜರಾಗುವ
ವಿದ್ಯಾರ್ಥಿಗಳಿಗೆ ಕೆಎಸ್ಆರ್‌ಟಿಸಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದೆ. ಪರೀಕ್ಷೆಯ ಹಾಲ್ ಟಿಕೆಟ್ ತೋರಿಸಿ ಬಸ್‌ನಲ್ಲಿ ಪ್ರಯಾಣಿಸಬಹುದು ಎಂದು ಕೆಎಸ್ಆರ್‌ಟಿಸಿ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.