ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಲಿಯೊ ಮುಕ್ತ ಸ್ಥಿತಿ ಕಾಯ್ದುಕೊಳ್ಳಬೇಕು: ಸಚಿವ ದಿನೇಶ್ ಗುಂಡೂರಾವ್

ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Published 3 ಮಾರ್ಚ್ 2024, 15:58 IST
Last Updated 3 ಮಾರ್ಚ್ 2024, 15:58 IST
ಅಕ್ಷರ ಗಾತ್ರ

ಬೆಂಗಳೂರು: ‘ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಪೋಲಿಯೊ ಮುಕ್ತ ಸ್ಥಿತಿಯನ್ನು ಕಾಯ್ದುಕೊಳ್ಳಬೇಕು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. 

ಇಲ್ಲಿನ ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಮಕ್ಕಳಿಗೆ ಪಲ್ಸ್ ಪೋಲಿಯೊ ಎರಡು ಹನಿ ಹಾಕುವ ಮೂಲಕ ನಗರದಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ‘ದೇಶವು ಪೋಲಿಯೊ ಮುಕ್ತ ರಾಷ್ಟ್ರವಾಗಿದೆ. ಈ ಸ್ಥಿತಿ ಕಾಯ್ದುಕೊಳ್ಳಲು ಐದು ವರ್ಷದೊಳಗಿನ ಮಕ್ಕಳಿಕೆ ಪೋಲಿಯೊ ಹನಿ ಹಾಕಲಾಗುತ್ತಿದೆ. ಭಾನುವಾರ ನಡೆದ ಅಭಿಯಾನದಲ್ಲಿ ಲಸಿಕೆ ಹಾಕಿಸಿಕೊಳ್ಳದ, ಬಿಟ್ಟು ಹೋದ ಮಕ್ಕಳಿಗೆ ಪೋಲಿಯೊ ಹನಿ ಹಾಕಲು ಇದೇ 6ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಕಾರ್ಯಕರ್ತೆಯರು ಮನೆಗಳಿಗೆ ತೆರಳಿ ಪೋಲಿಯೊ ಹನಿ ಹಾಕಲಿದ್ದಾರೆ’ ಎಂದು ಹೇಳಿದರು. 

ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ನವೀನ್ ಭಟ್, ‘ವಲಸಿಗ ಸಮುದಾಯ, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳಲ್ಲಿ ವಾಸಿಸುತ್ತಿರುವವರು ಹಾಗೂ ನಗರ ಪ್ರದೇಶದ ಕೋಳೆಗೇರಿಗಳಲ್ಲಿ ವಾಸಿಸುವ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಿ, ಪೋಲಿಯೊ ಹನಿ ಹಾಕಲಾಗಿದೆ. 2011ರಲ್ಲಿ ಪಶ್ಚಿಮ ಬಂಗಳಾದಲ್ಲಿ ಕೊನೆಯ ಪೋಲಿಯೊ ಪ್ರಕರಣ‌ ವರದಿಯಾಗಿತ್ತು. ಬಳಿಕ ದೇಶದಲ್ಲಿ ಈವರೆಗೆ ಯಾವುದೇ ಪೋಲಿಯೊ ಪ್ರಕರಣ ವರದಿಯಾಗಿಲ್ಲ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT