ಬೆಂಗಳೂರು : ಬಾಂಗ್ಲಾದೇಶದ ಅಕ್ರಮ ವಲಸಿಗರ ಶೆಡ್ಗಳಿಗೆ ತೆರಳಿ ಅವರ ಆಧಾರ್ ಕಾರ್ಡ್, ಗುರುತಿನ ಚೀಟಿ ಪರಿಶೀಲನೆ ನಡೆಸಲಾಗಿದೆ ಎಂಬ ದೂರಿನ ಮೇರೆಗೆ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.

ಶೆಡ್ ವಾಸಿಗಳ ಬಳಿ ರಾಷ್ಟ್ರೀಯತೆ ಬಗ್ಗೆ ಪ್ರಶ್ನೆ ಮಾಡಿದ್ದ ಕಾರಣ ಪುನೀತ್ ಕೆರೆಹಳ್ಳಿ ಹಾಗೂ ಪಡೆಯ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಜನಾಂದೋಲನ ವತಿಯಿಂದ ಇ-ಮೇಲ್ ಮೂಲಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿತ್ತು.

ಬಾಂಗ್ಲಾ ವಲಸಿಗರ ರಾಷ್ಟ್ರೀಯತೆಯನ್ನು ಪುನೀತ್ ಹಾಗೂ ಪಡೆಯ ಸದಸ್ಯರು ಪ್ರಶ್ನಿಸಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೆ ಶುಕ್ರವಾರ ರಾತ್ರಿ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.