ಬೆಂಗಳೂರು: ಅಪರಾಧ ಕೃತ್ಯಗಳಲ್ಲಿ ನಿರಂತರವಾಗಿ ಭಾಗಿಯಾಗುತ್ತಿರುವ ಆರೋಪದಡಿ ರಾಷ್ಟ್ರರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ಅವರನ್ನು ಬಸವನಗುಡಿ ಠಾಣೆಯ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ.

ಪುನೀತ್ ಅವರು ಇದುವರೆಗೂ 14 ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಬಿಎನ್ಎಸ್ಎಸ್ ಸೆಕ್ಷನ್ 127ರ ಅಡಿ ಪ್ರಕರಣ ದಾಖಲಿಸಿಕೊಂಡು ಬೆಂಗಳೂರು ದಕ್ಷಿಣ ವಿಭಾಗದ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಎದುರು ಹಾಜರು ಪಡಿಸಲಾಯಿತು.

ಇನ್ನ ಮುಂದೆ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿ ಆಗುವುದಿಲ್ಲ. ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದಕ್ಕೆ ಧಕ್ಕೆ ತರುವುದಿಲ್ಲ ಎಂಬುದಾಗಿ ಮುಚ್ಚಳಿಕೆ ಬರೆದುಕೊಡುವಂತೆ ದಂಡಾಧಿಕಾರಿಯವರು ಆರೋಪಿ ಪುನೀತ್ಗೆ ಸೂಚನೆ ನೀಡಿದರು. ಆದರೆ, ಮುಚ್ಚಳಿಕೆ ಬರೆದುಕೊಡಲು ನಿರಾಕರಿಸಿದ್ದರಿಂದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.