ಬುಧವಾರ, ಜನವರಿ 22, 2020
18 °C

ಬಿಎಂಟಿಸಿಗೆ ಪುನೀತ್ ರಾಯಭಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಯಾವುದೇ ಸಂಭಾವನೆ ಪಡೆಯದೆ ಬಿಎಂಟಿಸಿ ಮತ್ತು ಬಸ್ ಆದ್ಯತಾ ಪಥಕ್ಕೆ ರಾಯಭಾರಿಯಾಗಲು ನಟ ಪುನೀತ್ ರಾಜ್‌ಕುಮಾರ್ ಒಪ್ಪಿಕೊಂಡಿದ್ದಾರೆ.

ಬಸ್‌ ಪ್ರಯಾಣಿಕರ ಸಂಖ್ಯೆ ಹೆಚ್ಚಳಕ್ಕೆ ಮತ್ತು ಸಿಲ್ಕ್ ಬೋರ್ಡ್‌ನಿಂದ ಟಿನ್ ಫ್ಯಾಕ್ಟರಿ ವರೆಗಿನ ಬಸ್‌ ಆದ್ಯತಾ ಪಥದ ಬಗ್ಗೆ ವ್ಯಾಪಕ ಪ್ರಚಾರ ನಡೆಸುತ್ತಿರುವ ಬಿಎಂಟಿಸಿ, ಈಗ ಪುನೀತ್ ಅವರನ್ನು ರಾಯಭಾರಿಯಾಗಿ ನೇಮಿಸಿಕೊಂಡಿದೆ.

‘ಇದೊಂದು ಸಾಮಾಜಿಕ ಜವಾಬ್ದಾರಿ ಎಂದು ಪರಿಗಣಿಸಿರುವ ಪುನೀತ್‌ ಅವರು ಉಚಿತವಾಗಿ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರೆ’ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು