ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕಾಲುವೆಗಳಿಗೆ ತಂತಿಬೇಲಿ: ಹೈಕೋರ್ಟ್‌ ಮೌಖಿಕ ನಿರ್ದೇಶನ

Last Updated 10 ಜನವರಿ 2020, 19:03 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ರಾಜಕಾಲುವೆ ಮತ್ತು ಬೃಹತ್‌ ಚರಂಡಿಗಳಿಗೆ ತಂತಿಬೇಲಿ ಅಳವಡಿಕೆ ಅಥವಾ ತಡೆಗೋಡೆ ನಿರ್ಮಿಸಬೇಕು’ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗೀತಾಲಕ್ಷ್ಮಿ ಎಂಬ ಬಾಲಕಿ 2014ರಲ್ಲಿ ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವೈ.ಎಚ್‌.ವಿಜಯಕುಮಾರ್ ಮೃತ ಬಾಲಕಿಗೆ ನೀಡಲಾದ ಪರಿಹಾರದ ಕುರಿತಂತೆ ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿದರು.

ಇದೇ ವೇಳೆ ಅರ್ಜಿದಾರರ ಪರ ವಕೀಲರು, ‘ಬೆಂಗಳೂರು ನಗರದ ಮಾದರಿಯಲ್ಲಿಯೇ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿಯೂ ರಾಜಕಾಲುವೆಗಳಿಗೆ ತಂತಿಬೇಲಿ ಅವಳಡಿಸುವ ವ್ಯವಸ್ಥೆ ಆಗಬೇಕಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ‘ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಈ ಕುರಿತಂತೆ ಸುತ್ತೋಲೆ ಹೊರಡಿಸಬೇಕು. ಈ ಸಂಬಂಧ ಕೈಗೊಂಡ ಕ್ರಮಗಳ ಕುರಿತು ಮುಂದಿನ ವಿಚಾರಣೆ ವೇಳೆ ಅನುಪಾಲನಾ ವರದಿ ಸಲ್ಲಿಸಬೇಕು’ ಎಂದು ವಿಜಯಕುಮಾರ್‌ ಅವರಿಗೆ ಸೂಚಿಸಿ ವಿಚಾರಣೆಯನ್ನು ಫೆಬ್ರುವರಿ 18ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT