ಶನಿವಾರ, ಡಿಸೆಂಬರ್ 4, 2021
20 °C

ಪುಟ್ಟೇನಹಳ್ಳಿ ಕೆರೆ ಸಂರಕ್ಷಣೆ: ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೆರೆ ಸಂರಕ್ಷಣೆಗೆ ಕೈಗೊಂಡ ಕ್ರಮಗಳ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ಪುಟ್ಟೇನಹಳ್ಳಿ ಕೆರೆ ಪಕ್ಷಿ ಸಂರಕ್ಷಣಾ ಸಮಿತಿಯ ಸದಸ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಯಲಹಂಕ ಪುಟ್ಟೇನಹಳ್ಳಿ ಕೆರೆ ಮತ್ತು ಪಕ್ಷಿ ಸಂರಕ್ಷಣಾ ಟ್ರಸ್ಟ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ಕೆರೆ ನಿರ್ವಹಣೆ ಜವಾಬ್ದಾರಿಯನ್ನು ಬಿಬಿಎಂಪಿಗೆ ರಾಜ್ಯ ಸರ್ಕಾರ 2019 ಡಿಸೆಂಬರ್‌ನಲ್ಲಿ ಹಸ್ತಾಂತರಿಸಿತ್ತು. ನಿರ್ವಹಣಾ ಸಮಿತಿ ರಚಿಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು.

‘2020ರ ಆಗಸ್ಟ್ 24ರಂದು ಸಮಿತಿಯನ್ನು ಮರು ರಚನೆ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಒಬ್ಬ ಅಧಿಕಾರಿಯನ್ನು ಸದಸ್ಯ ಕಾರ್ಯದರ್ಶಿಯಾಗಿ ನೇಮಿಸಿ ಕೂಡಲೇ ಆದೇಶ ಮಾರ್ಪಡಿಸಬೇಕು’ ಎಂದು ಪೀಠ ಆದೇಶಿಸಿತು. 

‘ಸದಸ್ಯ ಕಾರ್ಯದರ್ಶಿಯು ನಿಯಮಿತವಾಗಿ ಸಭೆಗಳನ್ನು ನಡೆಸಿ ಕೆರೆ ಸಂರಕ್ಷಣೆಗೆ ಅಗತ್ಯ ಯೋಜನೆಗಳನ್ನು ರೂಪಿಸಬೇಕು. ಕೈಗೊಂಡ ಕ್ರಮಗಳ ಕುರಿತು ಸೆ.30ರೊಳಗೆ ಅಫಿಡವಿಟ್ ಸಲ್ಲಿಸಬೇಕು’ ಎಂದು ಪೀಠ ತಿಳಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.