ಬೆಂಗಳೂರು: ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಬಸವರಾಜ್ (25) ಅವರನ್ನು ಕತ್ತು ಕೊಯ್ದು ಕೊಲೆ ಮಾಡಿದ್ದ ಆರೋಪಿ ಅಭಿಜಿತ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

‘ಗದಗಿನ ಬಸವರಾಜ್ ಹಾಗೂ ಕನಕಪುರದ ಅಭಿಜಿತ್, ಇಬ್ಬರೂ ಪೇಟಿಂಗ್ ಕೆಲಸ ಮಾಡುತ್ತಿದ್ದರು. ನಿತ್ಯವೂ ಒಟ್ಟಿಗೆ ರಾತ್ರಿ ಮದ್ಯದ ಪಾರ್ಟಿ ಮಾಡುತ್ತಿದ್ದರು. ಇದೇ ಸಂದರ್ಭದಲ್ಲೇ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಳ್ಳುತ್ತಿದ್ದರು’ ಎಂದು ಪೊಲೀಸರು ಹೇಳಿದರು.

‘ಡಿ. 6ರಂದು ರಾತ್ರಿ ಇಬ್ಬರ ನಡುವೆ ಪುನಃ ಜಗಳವಾಗಿತ್ತು. ಇದರಿಂದ ಸಿಟ್ಟಾದ ಅಭಿಜಿತ್, ಬಸವರಾಜ್ ಅವರ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದ. ತನಿಖೆ ಕೈಗೊಂಡಿದ್ದ ವಿಶೇಷ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ’ ಎಂದು ತಿಳಿಸಿದರು.

‘ನನಗೆ ಹಾಗೂ ನನ್ನ ಪತ್ನಿ ಬಗ್ಗೆ ಬಸವರಾಜ್ ಅವಾಚ್ಯವಾಗಿ ಮಾತನಾಡುತ್ತಿದ್ದ. ಹಲವು ಬಾರಿ ಎಚ್ಚರಿಕೆ ನೀಡಿದರೂ ಬುದ್ದಿ ಕಲಿತಿರಲಿಲ್ಲ. ಇದೇ ಕಾರಣಕ್ಕೆ ಆತನನ್ನು ಕೊಲೆ ಮಾಡಿದ್ದೇನೆ’ ಎಂಬುದಾಗಿ ಆರೋಪಿ ಅಭಿಜಿತ್ ಹೇಳಿಕೆ ನೀಡಿದ್ದಾನೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.