ಮಂಗಳವಾರ, ಫೆಬ್ರವರಿ 7, 2023
27 °C

ಸ್ನೇಹಿತರ ಗಲಾಟೆ: ಕೊಲೆಯಲ್ಲಿ ಅಂತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಬಸವರಾಜ್ (25) ಎಂಬುವವರನ್ನು ಕೊಲೆ ಮಾಡಲಾಗಿದ್ದು, ಸ್ನೇಹಿತ ಅಭಿಜಿತ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

‘ಬಸವರಾಜ್ ಹಾಗೂ ಅಭಿಜಿತ್ ನಡುವೆ ಗಲಾಟೆ ಆಗಿತ್ತು. ಇದರಿಂದ ವೈಷಮ್ಯ ಬೆಳೆದಿತ್ತು. ಬಸವರಾಜ್ ಅವರನ್ನು ಕೊಲೆ ಮಾಡಿ ಅಭಿಜಿತ್ ಪರಾರಿಯಾಗಿದ್ದು, ಆತನ ಪತ್ತೆಗಾಗಿ ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಗಲಾಟೆಗೆ ಸಂಬಂಧಪಟ್ಟಂತೆ ಬಸವರಾಜ್ ಹಾಗೂ ಅಭಿಜಿತ್, ಕೆಲ ದಿನಗಳ ಹಿಂದೆ ಠಾಣೆ ಮೆಟ್ಟಿಲೇರಿದ್ದರು. ಇಬ್ಬರನ್ನೂ ಸಮಾಧಾನಪಡಿಸಿದ್ದ ಪೊಲೀಸರು, ಬುದ್ಧಿವಾದ ಹೇಳಿ ಕಳುಹಿಸಿದ್ದರು. ಮಂಗಳವಾರ ರಾತ್ರಿ ಇಬ್ಬರೂ ಪುನಃ ಒಂದೆಡೆ ಸೇರಿದ್ದರು. ಕುಡಿತ ಅಮಲಿನಲ್ಲಿದ್ದ ಅವರಿಬ್ಬರ ನಡುವೆ ಗಲಾಟೆ ಶುರುವಾಗಿತ್ತು. ಇದೇ ಸಂದರ್ಭದಲ್ಲೇ ಬಸವರಾಜ್ ಅವರನ್ನು ಕತ್ತು ಕೊಯ್ದು ಕೊಲೆ ಮಾಡಲಾಗಿದೆ’ ಎಂದು ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು