ಮಂಗಳವಾರ, ಜನವರಿ 21, 2020
28 °C

ಪಿಡಬ್ಲ್ಯುಡಿನೇಮಕ: ಸರ್ಕಾರದ ಆದೇಶಕ್ಕೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ 570 ಕಿರಿಯ ಮತ್ತು 300 ಕಾರ್ಯನಿರ್ವಾಹಕ ಎಂಜಿನಿಯರ್‌ಗಳ ನೇಮಕ ಪ್ರಕ್ರಿಯೆ ರದ್ದುಗೊಳಿಸಿರುವ ಸರ್ಕಾರದ ಆದೇಶಕ್ಕೆ ಕರ್ನಾಟಕ ಆಡಳಿತಾತ್ಮಕ ಮಂಡಳಿ (ಕೆಎಟಿ) ಮಧ್ಯಂತರ ತಡೆ ನೀಡಿದೆ.

ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ಆಕ್ಷೇಪ: ‘ನೇಮಕ ಪ್ರಕ್ರಿಯೆ ರದ್ದುಗೊಳಿಸಿರುವುದು ಕಾನೂನು ಬಾಹಿರ ಕ್ರಮ. ಆದ್ದರಿಂದ ಆದೇಶ ರದ್ದುಗೊಳಿಸಬೇಕು ಹಾಗೂ ನೇಮಕ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಬೇಕು. ಹೊಸ ಸರ್ಕಾರ ಅಕ್ಟೋಬರ್ 31ರಂದು ನೇಮಕ ಪ್ರಕ್ರಿಯೆ ರದ್ದುಗೊಳಿಸುವ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ. ಅದು ಅಸಾಂವಿಧಾನಿಕ’ ಎಂಬುದು ಅರ್ಜಿದಾರರ ಆಕ್ಷೇಪ. ಅರ್ಜಿದಾರರ ಪರ ವಕೀಲ ಎಚ್.ಎಸ್. ಪ್ರಶಾಂತ್ ವಾದ ಮಂಡಿಸಿದರು.

ಪ್ರತಿಕ್ರಿಯಿಸಿ (+)