ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೃದಯ ಚಿಕಿತ್ಸೆಗೆ ಕ್ಯೂಆರ್ ಕೋಡ್

ನಗರದ ಪ್ರಮುಖ ವೃತ್ತಗಳ ಬಳಿ ಫಲಕ ಅಳವಡಿಕೆ
Last Updated 1 ಅಕ್ಟೋಬರ್ 2022, 20:27 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವ ಹೃದಯ ದಿನದ ಪ್ರಯುಕ್ತ ಮಣಿಪಾಲ್ ಆಸ್ಪತ್ರೆಗಳ ಸಮೂಹವು ಹೃದಯದ ತುರ್ತು ಚಿಕಿತ್ಸೆಗೆ ಕ್ಯೂಆರ್ ಕೋಡ್‌ ಬಿಡುಗಡೆ ಮಾಡಿದ್ದು, ನಗರದ ಪ್ರಮುಖ ವೃತ್ತಗಳ ಬಳಿ ವಿಶೇಷ ವಿನ್ಯಾಸದ ಫಲಕಗಳನ್ನು ಅಳವಡಿಸಲಾಗಿದೆ.

ಬಿಬಿಎಂಪಿ ಹಾಗೂ ಬೆಂಗಳೂರು ನಗರ ಸಂಚಾರ ಪೊಲೀಸರ ಸಹಯೋಗದಲ್ಲಿ ಈ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಹೃದಯದ ಸಮಸ್ಯೆ ಕಾಣಿಸಿಕೊಂಡಾಗ ಪ್ರಾಥಮಿಕ ಅಥವಾ ತುರ್ತು ಚಿಕಿತ್ಸೆಗೆ ಕ್ಯೂಆರ್ ಕೋಡ್‌ ಸ್ಕ್ಯಾನ್‌ ಮಾಡಿ, ವೈದ್ಯಕೀಯ ಸೇವೆ ಪಡೆದುಕೊಳ್ಳಬಹುದಾಗಿದೆ. ವ್ಯಕ್ತಿ ಕ್ಯೂಆರ್‌ ಕೋಡ್ ಸ್ಕ್ಯಾನ್ ಮಾಡುತ್ತಿದ್ದಂತೆಯೇ ತುರ್ತು ಸಂಖ್ಯೆಗೆ ಸಂಪರ್ಕ ಕಲ್ಪಿಸಿ, ಆಂಬುಲೆನ್ಸ್ ಸೇವೆಗೆ ನಿರ್ದೇಶಿಸಲಾಗುತ್ತದೆ ಎಂದು ಆಸ್ಪತ್ರೆ ತಿಳಿಸಿದೆ.

ನಗರದಲ್ಲಿ ಶನಿವಾರ ಆಸ್ಪತ್ರೆ ಆಯೋಜಿಸಿದ‘ಸಿಪಿಆರ್‌’ (ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್) ತರಬೇತಿ ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.ಹೃದಯ ಸ್ತಂಭನಕ್ಕೆ ಒಳಗಾದವರಿಗೆ ತುರ್ತು ಚಿಕಿತ್ಸೆ ಒದಗಿಸುವಿಕೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಯಿತು. ಸಿಪಿಆರ್‌ ಕ್ರಮದ ಬಗ್ಗೆ ತಿಳಿಸುವ ಕ್ಯೂಆರ್‌ ಕೋಡ್‌ ಅನ್ನು ಆಸ್ಪತ್ರೆ ಬಿಡುಗಡೆ ಮಾಡಿತು.

‘ಸಿಪಿಆರ್ ವಿಧಾನದಿಂದ ಹೃದಯ ಮತ್ತು ಶ್ವಾಸಕೋಶಗಳ ಪುನರುಜ್ಜೀವನಗೊಳಿಸಿ, ವ್ಯಕ್ತಿಯ ಜೀವ ಉಳಿಸಲು ಸಾಧ್ಯ. ಇದನ್ನು ಯಾವ ರೀತಿ‌ ಬಳಸಬಹುದು ಎಂಬುದು ಬಹುತೇಕರಿಗೆ ತಿಳಿದಿಲ್ಲ. ತುರ್ತು ಸಂದರ್ಭದಲ್ಲಿ ತ್ವರಿತವಾಗಿ ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ಕ್ಯೂಆರ್ ಕೋಡ್‌ಗಳನ್ನು ರೂಪಿಸಲಾಗಿದೆ’ ಎಂದುಆಸ್ಪತ್ರೆಯ ಪ್ರಾದೇಶಿಕ ಮುಖ್ಯ ಕಾರ್ಯಾಚರಣೆ ಅಧಿಕಾರಿ ದೀಪಕ್ ವೇಣುಗೋಪಾಲನ್ ತಿಳಿಸಿದರು.

‘ವೈದ್ಯಕೀಯ ತುರ್ತು ಪರಿಸ್ಥಿತಿಯಲ್ಲಿ ವ್ಯಕ್ತಿಗೆ ತುರ್ತು ಸಂಖ್ಯೆಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದು ಕಷ್ಟವಾಗಲಿದೆ. ಆದ್ದರಿಂದ ನಗರದ ಎಲ್ಲ ಸಿಗ್ನಲ್‌ಗಳಲ್ಲಿ ಕ್ಯೂಆರ್‌ ಕೋಡ್‌ ಫಲಕ ಅಳವಡಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT