ಮಂಗಳವಾರ, ಡಿಸೆಂಬರ್ 1, 2020
17 °C
ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಭರವಸೆ

ಕನ್ನಡಿಗರಿಗೆ ಗುಣಮಟ್ಟದ ಆರೋಗ್ಯ ಸೇವೆ: ಸುಧಾಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸಮೃದ್ಧ ಕರ್ನಾಟಕವು ಆರೋಗ್ಯ ಕರ್ನಾಟಕವಾಗಿ ಪರಿವರ್ತನೆ ಯಾಗಬೇಕಿದೆ. ಅಧಿಕಾರಿಗಳು ಸೇರಿ ದಂತೆ 3 ಲಕ್ಷ ಸಿಬ್ಬಂದಿಯ ನೆರವಿನಿಂದ 6 ಕೋಟಿ ಕನ್ನಡಿಗರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲಾಗುವುದು’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಭರವಸೆ ನೀಡಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಗರದಲ್ಲಿ ಗುರು ವಾರ ಆಯೋಜಿಸಿದ ಕನ್ನಡ ರಾಜ್ಯೋ
ತ್ಸವ ಸಮಾರಂಭದಲ್ಲಿ ಮಾತನಾಡಿದರು.

‘ಆರೋಗ್ಯ ಇಲಾಖೆಯಡಿ 2.50 ಲಕ್ಷ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಡಿ 30 ಸಾವಿರದಿಂದ 40 ಸಾವಿರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಎರಡೂ ಇಲಾಖೆಗಳನ್ನು ನಿರ್ವಹಣೆ ಮಾಡುತ್ತಿರುವ ಕಾರಣ ವೈದ್ಯಕೀಯ ಸೇವೆಗಳನ್ನು ಒದಗಿಸಲು ಇದ್ದ ತೊಡಕುಗಳನ್ನು ಸುಲಭವಾಗಿ ನಿವಾರಿಸಬಹುದು’ ಎಂದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.