ಬೆಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ಕುರಿತು ಪರಿಶೀಲನೆ ನಡೆಸಲು ಡಾ.ಮನ್ಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಆಂತರಿಕ ತನಿಖಾ ಸಮಿತಿ ರಚಿಸಿದೆ.

2026ರ ಜ.1ರಂದು ಬಿ.ಕಾಂ 5ನೇ ಸೆಮಿಸ್ಟರ್ನ ಅಡ್ವಾನ್ಸ್ಡ್ ಅಕೌಂಟಿಂಗ್ ವಿಷಯದ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆದರೆ, ಈ ಆರೋಪವನ್ನು ವಿಶ್ವವಿದ್ಯಾಲಯದ ಅಧಿಕಾರಿಗಳು ನಿರಾಕರಿಸಿದ್ದರು. ಪರೀಕ್ಷೆಯನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸಲಾಗಿದೆ ಎಂದು ಸ್ಪಷ್ಟಪಡಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಪಿ.ಬಸವರಾಜು ಅವರು ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯ ಕುರಿತು ಸಮಗ್ರ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದರು.

ಈ ಎಲ್ಲ ಬೆಳವಣಿಗೆಗಳ ನಂತರ ವಿಶ್ವವಿದ್ಯಾಲಯವು ಸಿಂಡಿಕೇಟ್ ಸದಸ್ಯ ಎಚ್.ಕೃಷ್ಣರಾಮ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ವರದಿ ಸಲ್ಲಿಸುವಂತೆ ಸೂಚಿಸಿದೆ.