ಬೆಂಗಳೂರು: ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಪ್ರಕರಣದಲ್ಲಿ ಮುಖ್ಯ ಶಿಕ್ಷಕರು ಸೇರಿ ಎಂಟು ಮಂದಿಯನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ತುಮಕೂರಿನ ಶಾಲೆಯೊಂದರ ಮುಖ್ಯಶಿಕ್ಷಕ ವಿ.ಡಿ.ಗಿರೀಶ್, ಕಲಬುರಗಿಯ ಶಾಲೆಯೊಂದರ ಮುಖ್ಯಶಿಕ್ಷಕಿ ಶಾಹಿದಾ ಬೇಗಂ, ಶಿಕ್ಷಕರಾದ ಮೊಹಮ್ಮದ್ ಸಿರಾಜುದ್ದೀನ್, ಫರ್ಜಾನಾ ಬೇಗಂ, ಸಹ ಶಿಕ್ಷಕಿ ಫಾಹ್ಮಿದಾ, ರಾಮನಗರ ಶಾಲೆಯ ಸಹ ಶಿಕ್ಷಕ ಅಮ್ಜದ್ ಖಾನ್ ಹಾಗೂ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ.

ಹಿಂದಿ ವಿಷಯದ ಪ್ರಶ್ನೆ ಪತ್ರಿಕೆ ಯೂಟ್ಯೂಬ್ನಲ್ಲಿ ಹರಿದಾಡಿತ್ತು. ಸಮಾಜ ವಿಜ್ಞಾನ, ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಕೂಡ ಸೋರಿಕೆ ಆಗಿತ್ತು. ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕಾರಿ ಪಿ.ಮಂಜುನಾಥ್ ಅವರು ನೀಡಿದ ದೂರು ಆಧರಿಸಿ, ಉತ್ತರ ವಿಭಾಗದ ಸೆನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.

‘ತುಮಕೂರು, ರಾಮನಗರ ಮತ್ತು ಕಲಬುರಗಿ ಜಿಲ್ಲೆಗಳ ಕೆಲವು ಶಾಲೆಗಳ ಶಿಕ್ಷಕರು ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಶಾಮೀಲಾಗಿರುವುದು ಪ್ರಾಥಮಿಕ ತನಿಖೆಯಿಂದ ಪತ್ತೆಯಾಗಿದೆ. ವಿದ್ಯಾರ್ಥಿಗಳು ಸಹ ಇದರಲ್ಲಿ ಭಾಗಿಯಾಗಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಯಾವ ರೀತಿಯಲ್ಲಿ ನಡೆದಿದೆ? ಇತರರು ಶಾಮೀಲಾಗಿದ್ದಾರೆಯೇ? ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದರು.

‘ಪ್ರಶ್ನೆ ಪತ್ರಿಕೆ ಸೋರಿಕೆಯ ಮೂಲ ಇನ್ನೂ ಪತ್ತೆಯಾಗಿಲ್ಲ. ಬೆಂಗಳೂರು, ಮೈಸೂರು, ಕಲಬುರಗಿ ಮತ್ತು ಶಿವಮೊಗ್ಗದಲ್ಲಿ ಪ್ರಶ್ನೆಪತ್ರಿಕೆಗಳು ಸೋರಿಕೆ ಆಗಿರುವುದು ಗೊತ್ತಾಗಿದೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಲಿ ಎಂಬ ಕಾರಣಕ್ಕೆ ಶಿಕ್ಷಕರು ಪ್ರಶ್ನೆಗಳನ್ನು ಕಳುಹಿಸಿರುವ ಸಾಧ್ಯತೆ ಇದೆ. ಆದರೆ, ವಿದ್ಯಾರ್ಥಿಗಳು ಅದನ್ನು ಸಹಪಾಠಿಗಳಿಗೆ ಟೆಲಿಗ್ರಾಂ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ₹300 ರಿಂದ ₹500ಕ್ಕೆ ಮಾರಾಟ ಮಾಡಿದ್ದಾರೆ. ಪ್ರಶ್ನೆ ಪತ್ರಿಕೆಗಳನ್ನು ಜಾಲತಾಣದಲ್ಲಿ ಹಂಚಿಕೊಂಡಿರುವವರ ವಿರುದ್ಧವೂ ಕ್ರಮಕೈಗೊಳ್ಳಳಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.