ಶುಕ್ರವಾರ, ಫೆಬ್ರವರಿ 21, 2020
19 °C
ಪೊಲೀಸ್‌ ಅಧಿಕಾರಿ ವಿರುದ್ಧ ಕರಪತ್ರ ಹಂಚಿಕೆ ಆರೋಪ

ರವಿಕೃಷ್ಣಾರೆಡ್ಡಿ ಪೊಲೀಸರ ವಶಕ್ಕೆ, ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐಪಿಎಸ್‌ ಅಧಿಕಾರಿಯೊಬ್ಬರ ಬಗ್ಗೆ ಆಕ್ಷೇಪಾರ್ಹ ಬರಹಗಳಿರುವ ಕರಪತ್ರ ಹಂಚಿದ ಆರೋಪದ ಮೇಲೆ ಕರ್ನಾಟಕ ರಾಷ್ಟ್ರ ಸಮಿತಿ ಸಂಚಾಲಕ ರವಿಕೃಷ್ಣಾ ರೆಡ್ಡಿ ಅವರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದು ಆನಂತರ ಬಿಡುಗಡೆ ಮಾಡಿದರು. 

ಪೊಲೀಸ್‌ ಕಮಿಷನರ್‌ ಕಚೇರಿ ಎದುರು ಕರಪತ್ರಗಳನ್ನು ಹಂಚಿ, ಕಬ್ಬನ್‌ ಪಾರ್ಕ್‌ನಲ್ಲಿ ನಿಲ್ಲಿಸಿದ್ದ ತಮ್ಮ ಕಾರು ಹತ್ತಲು ರವಿ ಕೃಷ್ಣಾರೆಡ್ಡಿ ಮುಂದಾಗುತ್ತಿದ್ದಂತೆ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಆನಂತರ ಅಶೋಕನಗರ ಪೊಲೀಸ್‌ ಠಾಣೆಗೆ ಕರೆದೊಯ್ದು ವಿಚಾ
ರಣೆ ನಡೆಸಿ ಬಿಡುಗಡೆ ಮಾಡಲಾಯಿತು.

ರವಿಕೃಷ್ಣಾರೆಡ್ಡಿ ಅವರ ಜತೆಗಿದ್ದ ರಘು ಜಾಣಗೆರೆ ಹಾಗೂ ವತ್ಸಲಾ ಅವರನ್ನೂ ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು. ರವಿ ಅವರನ್ನು ಪೊಲೀಸರು ಎಳೆದಾಡುವುದನ್ನು ವತ್ಸಲಾ ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದರು. ಇದಕ್ಕೆ ಪೊಲೀಸರು ಆಕ್ಷೇಪಿಸಿದರು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಪೊಲೀಸ್‌ ಅಧಿಕಾರಿ ಅವರು ತಮ್ಮ ವಿರುದ್ಧ ಆಕ್ಷೇಪಾರ್ಹ ಬರಹಗಳನ್ನು ಹಂಚದಂತೆ ಮತ್ತು ಮಾಧ್ಯಮಗಳಲ್ಲೂ ಈ ಬಗ್ಗೆ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ರವಿಕೃಷ್ಣಾರೆಡ್ಡಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ ಕ್ರಮವನ್ನು ಪೊಲೀಸರ ಕ್ರಮವನ್ನು ಕರ್ನಾಟಕ ರಾಷ್ಟ್ರ ಸಮಿತಿ ಮುಖಂಡ ದೀಪಕ್‌ ಖಂಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)