ಶನಿವಾರ, ನವೆಂಬರ್ 16, 2019
24 °C

ಅನರ್ಹರ ಕ್ಷೇತ್ರಗಳಿಗೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರ ನೇಮಕ

Published:
Updated:
Prajavani

ರಾಜರಾಜೇಶ್ವರಿನಗರ: ಹೇರೋಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರೇವಣಸಿದ್ಧಯ್ಯ, ಕೆಂಗೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅಮೃತ್‍ರಾಜ್ ಅವರನ್ನು ನೇಮಕ ಮಾಡಲಾಗಿದೆ. ಯಶವಂತಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‍ ಗುಂಡೂರಾವ್ ಆದೇಶ ಪತ್ರಗಳನ್ನು ವಿತರಿಸಿದರು.

ರೇವಣಸಿದ್ಧಯ್ಯ ಯಶವಂತಪುರ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಸದಸ್ಯರಾಗಿದ್ದರು. ಅಮೃತ್‍ರಾಜ್ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದರು.

ದಿನೇಶ್‍ಗುಂಡೂರಾವ್ ಮಾತನಾಡಿ, ‘ಎಲ್ಲ ಸಕ್ರಿಯ ಕಾರ್ಯಕರ್ತರು, ನಿಷ್ಠಾವಂತರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವ ಕೆಲಸವಾಗಬೇಕು. ಕ್ಷೇತ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಶಾಸಕರನ್ನು ಕಾಣಬೇಕು’ ಎಂದರು.

ಶಾಸಕ ಕೃಷ್ಣಬೈರೇಗೌಡ, ‘ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನು ತಿಳಿಸಿ ಪಕ್ಷವನ್ನು ಸದೃಢಗೊಳಿಸಬೇಕು’ ಎಂದರು.

 

ಪ್ರತಿಕ್ರಿಯಿಸಿ (+)