ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಲ್ಲಾಳು: 160 ಫಲಾನುಭವಿಗಳಿಗೆ ಸಚಿವರಿಂದ ಹಕ್ಕುಪತ್ರ ವಿತರಣೆ

Last Updated 2 ಮಾರ್ಚ್ 2020, 19:30 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: ‘ಉಲ್ಲಾಳು ಉಪನಗರದಲ್ಲಿ 450 ಒಂಟಿ ಮನೆಗಳ ನಿರ್ಮಾಣ ಕಾಮಗಾರಿ ವಿಳಂಬವಾಗಿದ್ದು, ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಮತ್ತೊಬ್ಬ ಗುತ್ತಿಗೆದಾರರಿಂದ ಐದು ತಿಂಗಳೊಳಗಾಗಿ ಸುಸಜ್ಜಿತ ಮನೆ ನಿರ್ಮಿಸಿಕೊಡಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭರವಸೆ ನೀಡಿದರು.

ಉಲ್ಲಾಳು ಉಪನಗರದಲ್ಲಿ ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ, 160 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ, ₹6 ಕೋಟಿ ವೆಚ್ಚದಲ್ಲಿ ಜ್ಞಾನಭಾರತಿ ಎರಡನೇ ಹಂತ, ಕೆಂಚನಾಪುರ ಕ್ರಾಸ್, ಗೊಲ್ಲರಹಟ್ಟಿಯಲ್ಲಿ ಕೈಗೊಂಡಿರುವ ಕಾಮಗಾರಿಗಳಿಗೆ ಚಾಲನೆ ನೀಡಿ, ‘ಎರಡು ತಿಂಗಳೊಳಗಾಗಿ 300 ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗುವುದು’ ಎಂದರು.

ಸ್ಥಳೀಯ ಪಾಲಿಕೆ ಸದಸ್ಯೆ ಶಾರದಾ ಮುನಿರಾಜು ಮಾತನಾಡಿ, ‘ಉಲ್ಲಾಳು ವಾರ್ಡ್ ವ್ಯಾಪ್ತಿಯಲ್ಲಿ ನೂರು ಕೋಟಿ ವೆಚ್ಚದಲ್ಲಿ ಒಳಚರಂಡಿ ಕಾಮಗಾರಿ ಅಂತಿಮ ಹಂತದಲ್ಲಿದೆ. ಬಹುತೇಕ ಬಡಾವಣೆಯಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದ್ದು, ಜಲಮಂಡಳಿ ಕಾಮಗಾರಿ ಮುಗಿದಿದ್ದರೆ ಎಲ್ಲಾ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗುವುದು’ ಎಂದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶಿವರಾಜು, ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಾರ್ಕಂಡೇಯ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT