ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಘವೇಶ್ವರ ಶ್ರೀಗಳ ವಿರುದ್ಧದ ಪ್ರಕರಣ: ಹಿಂದೆ ಸರಿದ 10ನೇ ನ್ಯಾಯಮೂರ್ತಿ

Last Updated 30 ಆಗಸ್ಟ್ 2019, 3:47 IST
ಅಕ್ಷರ ಗಾತ್ರ

ಬೆಂಗಳೂರು:"ಹೊಸನಗರ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ಆಡಳಿತದಲ್ಲಿ ಶ್ರೀ ಮಠದಲ್ಲಿ ಆರ್ಥಿಕ ಅವ್ಯವಹಾರ ನಡೆದಿದ್ದು ಅವರನ್ನು ಪೀಠದಿಂದ ಕೆಳಗಿಳಿಸಬೇಕು" ಎಂದು ಕೋರಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಪಿ.ಎಂ.ನವಾಜ್ ಹಿಂದೆ ಸೇರಿದಿದ್ದಾರೆ.

ಇದರಿಂದಾಗಿ ರಾಘವೇಶ್ವರ ಶ್ರೀಗಳ ವಿರುದ್ಧದ ಒಟ್ಟು ಪ್ರಕರಣಗಳಲ್ಲಿ ಇದೀಗ ವಿಚಾರಣೆಯಿಂದ 10ನ್ಯಾಯಮೂರ್ತಿಗಳು ಹಿಂದೆ ಸರಿದಂತಾಗಿದೆ.

ಇಂದು (ಗುರುವಾರ) ಮಧ್ಯಾಹ್ನ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಪ್ರಕರಣ ವಿಚಾರಣೆಗೆ ನಿಗದಿಯಾಗಿತ್ತು. ವಿಚಾರಣೆಗೆ ಪ್ರಕರಣವನ್ನು ಕೂಗಿಸಿದಾಗ ನವಾಜ್ ಅವರು ತಾವು ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದರು.

ಪ್ರಕರಣವನ್ನು ಬೇರೊಂದು ನ್ಯಾಯಪೀಠದ ಎದುರು ವಿಚಾರಣೆಗೆ ನಿಗದಿಪಡಿಸಲು ರಿಜಿಸ್ಟ್ರಾರ್ ಅವರಿಗೆ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT