ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಪ್ರಿಯಾಂಕಾ, ರಾಹುಲ್‌ ರೋಡ್‌ ಶೋ ಇಂದು

Published 6 ಮೇ 2023, 20:27 IST
Last Updated 6 ಮೇ 2023, 20:27 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ಮುಖಂಡ ರಾಹುಲ್‌ ಗಾಂಧಿ ಅವರು ‌ಪಕ್ಷದ ಅಭ್ಯರ್ಥಿಗಳ ಪರ ನಗರದಲ್ಲಿ ಭಾನುವಾರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 5 ಗಂಟೆಯಿಂದ 6.15ರವರೆಗೆ ಮಹದೇವಪುರದಲ್ಲಿ ಪಕ್ಷದ ಮುಖಂಡರು ಮತ್ತು ಕ್ಷೇತ್ರದ ಅಭ್ಯರ್ಥಿ ಎಚ್‌. ನಾಗೇಶ್‌ ಜೊತೆ ರೋಡ್‌ ಶೋದಲ್ಲಿ ನಡೆಸಲಿರುವ ಪ್ರಿಯಾಂಕಾ, ನಂತರ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಡೆಯಲಿರುವ ರೋಡ್‌ ಶೋ ಮತ್ತು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾತ್ರಿ 8.30ರಿಂದ 9.30ರವರೆಗೆ ಶಿವಾಜಿನಗರದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆ ಮತ್ತು ರೋಡ್‌ ಶೋದಲ್ಲಿ ಪ್ರಿಯಾಂಕಾ ಗಾಂಧಿ ಜೊತೆ ರಾಹುಲ್‌ ಗಾಂಧಿ ಕೂಡಾ ಭಾಗವಹಿಸಲಿದ್ದಾರೆ.

ಸಂಚಾರ ನಿರ್ಬಂಧ:

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಭಾನುವಾರ ನಗರದಲ್ಲಿ ರೋಡ್ ಶೋ ನಡೆಸಲಿದ್ದು, ಹಲವು ರಸ್ತೆಗಳಲ್ಲಿ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

‘ಸಂಜೆ 5 ಗಂಟೆಯಿಂದ 7 ಗಂಟೆಯವರೆಗೆ ಹಳೇ ವಿಮಾನ ನಿಲ್ದಾಣ ರಸ್ತೆ, ಸುರಂಜನ್‌ದಾಸ್ ರಸ್ತೆ, ಮಹದೇವಪುರ ಮುಖ್ಯರಸ್ತೆ, ಮಾರತ್ತಹಳ್ಳಿ ಮುಖ್ಯರಸ್ತೆ ಹಾಗೂ ವರ್ತೂರು ಕೋಡಿ ಮಾರ್ಗದಲ್ಲಿ ಸಂಚಾರ ನಿರ್ಬಂಧ ಇರಲಿದೆ’ ಎಂದು ಪೊಲೀಸರು ಹೇಳಿದ್ದಾರೆ.

‘ಹೊಂಗಸಂದ್ರ, ಬೊಮ್ಮನಹಳ್ಳಿ ಮುಖ್ಯರಸ್ತೆ, ಬೇಗೂರು ರಸ್ತೆ ಹಾಗೂ ಹೊಸೂರು ರಸ್ತೆಯಲ್ಲಿ ಸಂಜೆ 7 ಗಂಟೆಯಿಂದ 9 ಗಂಟೆಯವರೆಗೆ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಸಂಜೆ 6 ಗಂಟೆಯಿಂದ 10 ಗಂಟೆಯವರೆಗೆ ಶಿವಾಜಿನಗರದ ರಸೆಲ್ ಮಾರ್ಕೆಟ್‌ ಸ್ಕ್ವೇರ್, ಪೆರಿಯಾರ್ ವೃತ್ತ ಹಾಗೂ ಟ್ಯಾನರಿ ವೃತ್ತದಲ್ಲಿ ಸಂಚಾರ ನಿರ್ಬಂಧವಿದೆ. ಸಾರ್ವಜನಿಕರು ಪರ್ಯಾಯ ರಸ್ತೆ ಬಳಸಬೇಕು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT