ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ದಾಳಿ: ₹17 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ

Last Updated 20 ಮೇ 2022, 19:45 IST
ಅಕ್ಷರ ಗಾತ್ರ

ಬೆಂಗಳೂರು: ಜೀವನ್‌ಭಿಮಾನಗರ ಹಾಗೂ ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿದ್ದು, ₹ 17 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

‘ಡ್ರಗ್ಸ್ ಮಾರಾಟದ ಬಗ್ಗೆ ಮಾಹಿತಿ ಬರುತ್ತಿದ್ದಂತೆಯೇ ಪೊಲೀಸರ ತಂಡಗಳು ದಾಳಿ ಮಾಡಿದ್ದವು. ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಲಾಗಿದ್ದು, ಅವರ ಬಳಿ ಗಾಂಜಾ ಹಾಗೂ ಎಂಡಿಎಂಎ ಡ್ರಗ್ಸ್ ಪತ್ತೆಯಾಗಿವೆ’ ಎಂದು ಪೊಲೀಸರು ಹೇಳಿದರು.

ಮೈದಾನ ಬಳಿ ಮಾರಾಟ: ‘ಜೀವನ್‌ಭಿಮಾನಗರ ಬಳಿಯ ಮೈದಾನವೊಂದರಲ್ಲಿ ನಿಂತಿದ್ದ ಪೆಡ್ಲರ್, ಗಾಂಜಾ ಮಾರುತ್ತಿದ್ದ. ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಕಾರ್ಮಿಕರು ಆರೋಪಿ ಬಳಿ ಗಾಂಜಾ ಖರೀದಿಸುತ್ತಿದ್ದರು’ ಎಂದು ಜೀವನ್‌ಭಿಮಾನಗರ ಠಾಣೆ ಪೊಲೀಸರು ತಿಳಿಸಿದರು.

‘ಹೊರ ರಾಜ್ಯದಿಂದ ಗಾಂಜಾ ತರಿಸುತ್ತಿದ್ದ ಆರೋಪಿ, 10 ಗ್ರಾಂ ಗಾಂಜಾವನ್ನು ₹1,500ರಿಂದ ₹2,000ಕ್ಕೆ ಮಾರುತ್ತಿದ್ದ. ಈತನಿಂದ ₹ 2 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದೂ ಹೇಳಿದರು.

ತಾಂಜೇನಿಯಾ ಪ್ರಜೆ ಬಂಧನ: ‘ವಿದ್ಯಾಭ್ಯಾಸಕ್ಕೆಂದು ನಗರಕ್ಕೆ ಬಂದಿದ್ದ ತಾಂಜೇನಿಯಾ ಪ್ರಜೆ ಬರಾಕಾ ಸಾಲೇಮಾನಿ ಚಾವು (28), ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರುತ್ತಿದ್ದ. ಈತನನ್ನು ಬಂಧಿಸಿ, ₹ 15 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ತಿಳಿಸಿದರು.

‘ನಗರದ ಕಾಲೇಜೊಂದರಲ್ಲಿ ಆರೋಪಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ. ಐಷಾರಾಮಿ ಜೀವನ ನಡೆಸುವುದಕ್ಕಾಗಿ ಡ್ರಗ್ಸ್ ಮಾರುತ್ತಿದ್ದ. ಕೆಲ ಶಾಲಾ–ಕಾಲೇಜು ವಿದ್ಯಾರ್ಥಿಗಳು, ಕೆಲ ಖಾಸಗಿ ಕಂಪನಿ ಉದ್ಯೋಗಿಗಳು ಡ್ರಗ್ಸ್ ಖರೀದಿಸುತ್ತಿದ್ದರು’ ಎಂದೂ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT