ಬೆಂಗಳೂರು: ನಗರದ ಸುಮಾರು 400 ರೌಡಿಗಳು ಹಾಗೂ ಹಳೆ ಆರೋಪಿಗಳ ಮನೆ ಮೇಲೆ ದಾಳಿ ಮಾಡಿದ ಪೊಲೀಸರು 11 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಉತ್ತರ ವಿಭಾಗ ಡಿಸಿಪಿ ಸೈದುಲ್ಲಾ ಅಡಾವತ್ ಅವರ ನೇತೃತ್ವದಲ್ಲಿ ಎಸಿಪಿಗಳು, ಇನ್ಸ್ಪೆಕ್ಟರ್ಗಳು ಹಾಗೂ ಸಿಬ್ಬಂದಿ ಶುಕ್ರವಾರ ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ದಾಳಿ ನಡೆಸಿದ್ದಾರೆ.

ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದ 15 ಮಂದಿಯನ್ನು ವಶಕ್ಕೆ ಪಡೆದು , ಬಳಿಕ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು.

ದಾಳಿ ವೇಳೆ ರೌಡಿಗಳ ಮನೆಗಳಲ್ಲಿ ಕೆಲವು ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರೌಡಿಗಳು ಮಾಡುತ್ತಿರುವ ಉದ್ಯೋಗ, ಮೊಬೈಲ್ ನಂಬರ್ಗಳನ್ನು ನಮೂದಿಸಿಕೊಂಡ ಅಧಿಕಾರಿಗಳು, ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.