ಮಂಗಳವಾರ, ಏಪ್ರಿಲ್ 13, 2021
32 °C

ಗಾಂಜಾ ಸಾಗಣೆ; ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಒಡಿಶಾದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ರೈಲ್ವೆ ಪೊಲೀಸರು, ₹ 80 ಸಾವಿರ ಮೌಲ್ಯದ 8 ಕೆ.ಜಿ ಗಾಂಜಾ ಜಪ್ತಿ ಮಾಡಿದ್ದಾರೆ.

ಒಡಿಶಾದ ಬಸಂತ್ (28) ಹಾಗೂ ಹಲಸೂರಿನ ಮೌನೇಶ್ವರ ಬಂಧಿತರು. ಅವರಿಬ್ಬರ ವಿರುದ್ಧ ಮಾದಕವಸ್ತು ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್) ಅಡಿ ಪ್ರಕರಣ ದಾಖಲಾಗಿದೆ.

‘ಕೆಲವರು ರೈಲಿನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ಬಗ್ಗೆ ವ್ಯಕ್ತಿಯೊಬ್ಬರು ಮಾಹಿತಿ ನೀಡಿದ್ದರು. ಆ ಬಗ್ಗೆ ನಗರದ ಎಲ್ಲ ನಿಲ್ದಾಣಗಳ ಪೊಲೀಸರಿಗೆ ಸಂದೇಶ ರವಾನಿಸಲಾಗಿತ್ತು. ಕಂಟ್ಮೊನೆಂಟ್ ನಿಲ್ದಾಣಕ್ಕೆ ಬಂದಿಳಿದಿದ್ದ ಆರೋಪಿಗಳು ಪೊಲೀಸರಿಗೆ ಸಿಕ್ಕಿ
ಬಿದ್ದರು’ ಎಂದು ಮೂಲಗಳು ಹೇಳಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.