ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ಪೊಲೀಸರ ವಿಶೇಷ ಕಾರ್ಯಾಚರಣೆ: ₹60 ಲಕ್ಷ ಮೌಲ್ಯದ ಡ್ರಗ್ಸ್‌ ಜಪ್ತಿ

Published 30 ಡಿಸೆಂಬರ್ 2023, 15:21 IST
Last Updated 30 ಡಿಸೆಂಬರ್ 2023, 15:21 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ವರ್ಷದ ಪಾರ್ಟಿಗಳಿಗೆ ಪೂರೈಸಲು ಹೊರ ರಾಜ್ಯದಿಂದ ರೈಲುಗಳ ಮೂಲಕ ತರುತ್ತಿದ್ದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ರೈಲ್ವೆ ಪೊಲೀಸರು ಜಪ್ತಿ ಮಾಡಿ, ಏಳು ಮಂದಿಯನ್ನು ಬಂಧಿಸಿದ್ದಾರೆ.

ಉತ್ತರ ತ್ರಿಪುರದ ರಾಜೇಶ್‌ ದಾಸ್‌, ಬಿಹಾರದ ಅಮರ್‌ಜಿತ್‌ ಕುಮಾರ್, ಒಡಿಶಾದ ನಿತ್ಯಾನಾನದ್‌ ದಾಸ್‌, ನಿಕೇಶ್ ರಾಣ, ಜಲಂಧರ್‌ ಕನ್ಹರ್‌, ಬೋರೆಬೆಟ್ಟದ ಬೈಕುಂಟಾ ಕನ್ಹರ್‌ ಹಾಗೂ ಸಾಗರ್‌ ಕನ್ಹರ್‌ ಬಂಧಿತರು.

ಬಂಧಿತರಿಂದ ₹60ಲಕ್ಷ ಮೌಲ್ಯದ 60 ಕೆ.ಜಿ 965 ಗ್ರಾಂ ಮಾದಕ ವಸ್ತು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

‘ಆರೋಪಿಗಳು ಪ್ರಶಾಂತಿ ಎಕ್ಸ್‌ಪ್ರೆಸ್‌, ಶೇಷಾದ್ರಿ ಎಕ್ಸ್‌ಪ್ರೆಸ್‌, ಶಾಲಿಮರ್‌ ವಾಸ್ಕೊ ಎಕ್ಸ್‌ಪ್ರೆಸ್‌ಗಳ ಮೂಲಕ ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಜಿಲ್ಲೆಗಳ ಗ್ರಾಹಕರಿಗೆ ಪೂರೈಸಲು ಮಾದಕ ವಸ್ತುಗಳನ್ನು ತರುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ರೈಲುಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಲಾಯಿತು. ಆರೋಪಿಗಳ ವಿರುದ್ಧ ಬೆಂಗಳೂರು ನಗರ ಪೊಲೀಸ್‌ ಠಾಣೆ, ಬೈಯಪನಹಳ್ಳಿ ಪೊಲೀಸ್ ಠಾಣೆ ಹಾಗೂ ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT