ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲುಗಳಲ್ಲಿ ಕಳ್ಳತನ: ಮಹಿಳೆಯರಿಬ್ಬರ ಬಂಧನ

Last Updated 19 ಮೇ 2022, 16:26 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ರೈಲಿನಲ್ಲಿ ಪ್ರಯಾಣಿಸಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಟೋನ್ಮೆಂಟ್ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

‘ಹೊಸೂರು ಬಳಿಯ ಮತ್ತಿಕೆರೆಯ ರೂಪಾ (33) ಹಾಗೂ ಲಾವಣ್ಯ (28) ಬಂಧಿತರು. ಇಬ್ಬರಿಂದಲೂ ₹ 10 ಲಕ್ಷ ಮೌಲ್ಯದ 200 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಕೆ.ಆರ್.ಪುರ ನಿವಾಸಿ ಅಲೆಕ್ಸ್ ಎಂಬುವರು 2021ರ ಡಿಸೆಂಬರ್ 21ರಂದು ತಿರುಪತಿಗೆ ರೈಲಿನಲ್ಲಿ ಹೊರಟಿದ್ದರು. ನಗದು ಹಾಗೂ ಚಿನ್ನಾಭರಣವಿದ್ದ ಬ್ಯಾಗ್ ಕಳ್ಳತನ ಆಗಿತ್ತು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಆದರೆ, ಆರೋಪಿಗಳ ಸುಳಿವು ಸಿಕ್ಕಿರಲಿಲ್ಲ’ ಎಂದೂ ತಿಳಿಸಿದರು.

'ಇತ್ತೀಚೆಗೆ ತಮಿಳುನಾಡು ಗಡಿಯಲ್ಲಿ ಮಹಿಳೆಯರಿಬ್ಬರು ಚಿನ್ನಾಭರಣವಿಟ್ಟುಕೊಂಡು ಅನುಮಾನಾಸ್ಪದವಾಗಿ ಸುತ್ತಾಡುತ್ತಿದ್ದರು. ಅವರನ್ನು ತಡೆದಿದ್ದ ಪೊಲೀಸರು, ವಿಚಾರಣೆ ನಡೆಸಿದಾಗ ರೈಲಿನಲ್ಲಿ ಕಳ್ಳತನ ನಡೆಸಿದ್ದ ಬಗ್ಗೆ ಬಾಯ್ಬಿಟ್ಟಿದ್ದರು. ನಂತರವೇ ಮಹಿಳೆಯರನ್ನು ವಶಕ್ಕೆ ಪಡೆಯಲಾಯಿತು’ ಎಂದೂ ಹೇಳಿದರು.

‘ಹಸುಗೂಸು ಎತ್ತಿಕೊಂಡು ರೈಲಿಗೆ ಹತ್ತುತ್ತಿದ್ದ ಆರೋಪಿಗಳು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್‌ ಕಳ್ಳತನ ಮಾಡುತ್ತಿದ್ದರು. ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದ ಹಲವು ಕಡೆಗಳಲ್ಲಿ ಆರೋಪಿಗಳು ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT