ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲಿನಲ್ಲಿ ಕಳ್ಳತನ: ‘ಓಜಿ ಕುಪ್ಪಂ’ ಮಹಿಳೆಯರಿಬ್ಬರು ಬಂಧನ

Published 26 ಮಾರ್ಚ್ 2024, 14:31 IST
Last Updated 26 ಮಾರ್ಚ್ 2024, 14:31 IST
ಅಕ್ಷರ ಗಾತ್ರ

ಬೆಂಗಳೂರು: ರೈಲು ಹಾಗೂ ಬಸ್‌ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಸಂಚರಿಸಿ ಕಳ್ಳತನ ಮಾಡುತ್ತಿದ್ದ ಆರೋಪದಡಿ ಇಬ್ಬರು ಮಹಿಳೆಯರನ್ನು ಮಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

‘ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನ ಗಾಯತ್ರಿ ಅಲಿಯಾಸ್ ರೂಪಾ (38) ಮತ್ತು ತಮಿಳುನಾಡಿನ ಸಂಧ್ಯಾ ಅಲಿಯಾಸ್ ಶರಣ್ಯಾ (25) ಬಂಧಿತರು. ಇವರಿಬ್ಬರು, ಕಳ್ಳತನ ಪ್ರಕರಣದಲ್ಲಿ ಪದೇ ಪದೇ ಭಾಗಿಯಾಗುವ ಕುಪ್ಪಂ ತಂಡದ ಸದಸ್ಯರು. ಇವರಿಂದ 402 ಗ್ರಾಂ ತೂಕದ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ರೈಲ್ವೆ ಎಸ್ಪಿ ಎಸ್‌.ಕೆ. ಸೌಮ್ಯಲತಾ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಮುರುಡೇಶ್ವರದಿಂದ ಬೆಂಗಳೂರಿಗೆ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ ಆಗಿತ್ತು. ಈ ಬಗ್ಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡು, ಆರೋಪಿಗಳನ್ನು ಬಂಧಿಸಲಾಗಿದೆ’ ಎಂದರು.

‘ಜನರು ಹೆಚ್ಚು ಓಡಾಡುವ ರಜಾ ದಿನಗಳಂದು ಆರೋಪಿಗಳು, ಮಗುವನ್ನು ಎತ್ತಿಕೊಂಡು ರೈಲು ಹಾಗೂ ಬಸ್‌ಗಳಲ್ಲಿ ಸಂಚರಿಸುತ್ತಿದ್ದರು. ಕೆಲವು ಬಾರಿ ಟಿಕೆಟ್ ಕಾಯ್ದಿರಿಸುತ್ತಿದ್ದರು. ಹಲವು ಬಾರಿ, ಸಾಮಾನ್ಯ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು.’

‘ಚಿನ್ನಾಭರಣ ಇರುತ್ತಿದ್ದ ಮಹಿಳೆಯರನ್ನು ಗುರುತಿಸುತ್ತಿದ್ದ ಆರೋಪಿಗಳು, ಅವರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದರು. ನಿಲ್ದಾಣ ಬರುತ್ತಿದ್ದಂತೆ ರೈಲಿನಿಂದ ಇಳಿದು ಪರಾರಿಯಾಗುತ್ತಿದ್ದರು’ ಎಂದರು.

‘ಬೇಸಿಗೆ ಸಂದರ್ಭದಲ್ಲಿ ಹೆಚ್ಚಾಗಿ ಕಳ್ಳತನ ಮಾಡುತ್ತಿದ್ದ ಆರೋಪಿಗಳು, ನಂತರ ಏಳು ತಿಂಗಳು ತಮ್ಮೂರಿಗೆ ಹೋಗುತ್ತಿದ್ದರು. ಬಳಿಕ ಪುನಃ ನಗರಕ್ಕೆ ಬಂದು ಕಳ್ಳತನ ಮಾಡುತ್ತಿದ್ದರು. ರೈಲು ಮಾತ್ರವಲ್ಲದೇ ಬಸ್‌ಗಳಲ್ಲಿಯೂ ಆರೋಪಿಗಳು ಕಳ್ಳತನ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ಸೌಮ್ಯಲತಾ ಹೇಳಿದರು.

ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯನ್ನು ರಕ್ಷಿಸಿ ಪೋಷಕರಿಗೆ ಒಪ್ಪಿಸಿದ್ದ ದಾವಣಗೆರೆಯ ಕಾನ್‌ಸ್ಟೆಬಲ್‌ಗಳಾದ ಚನ್ನಮ್ಮ ಬಿ. ಹಾಗೂ ಸವಿತಾ ಎಚ್‌.ಬಿ, ಬಂಗಾರಪೇಟೆ ನಿಲ್ದಾಣದಲ್ಲಿ ರೈಲಿನಿಂದ ಆಯತಪ್ಪಿ ಬೀಳುತ್ತಿದ್ದ ವೃದ್ಧರೊಬ್ಬರನ್ನು ಕಾಪಾಡಿದ್ದ ಹೆಡ್ ಕಾನ್‌ಸ್ಟೆಬಲ್ ಬಿ.ವಿ. ಅಶೋಕ ಹಾಗೂ ಮಂಡ್ಯ ರೈಲು ನಿಲ್ದಾಣದಲ್ಲಿ ತಮ್ಮ ಮೇಲೆ ಹಲ್ಲೆಯಾದರೂ ಕಿಡಿಗೇಡಿಗಳನ್ನು ಬೆನ್ನಟ್ಟಿ ಹಿಡಿದಿದ್ದ ಕಾನ್‌ಸ್ಟೆಬಲ್ ಸತೀಶ್ ಚಂದ್ರ ಅವರಿಗೆ ರೈಲ್ವೆ ಪೊಲೀಸ್ ವತಿಯಿಂದ ‘ಮಾರ್ಚ್ ತಿಂಗಳ ಮಾದರಿ ವ್ಯಕ್ತಿ’ ಪ್ರಶಂಸನಾ ಪತ್ರ ನೀಡಿ ಎಸ್ಪಿ ಎಸ್‌.ಕೆ. ಸೌಮ್ಯಲತಾ ಅವರು ಗೌರವಿಸಿದರು – ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT