ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ‌| ಮೂರು ದಿನಗಳಲ್ಲಿ ಮಳೆ ಸಾಧ್ಯತೆ

Last Updated 19 ಜೂನ್ 2019, 20:18 IST
ಅಕ್ಷರ ಗಾತ್ರ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ದುರ್ಬಲಗೊಂಡಿರುವ ಮುಂಗಾರು ಮಳೆ ಇದರಿಂದಾಗಿ ಚೇತರಿಸಿಕೊಳ್ಳಲಿದೆ.

‘ವಾಯುಭಾರ ಕುಸಿತ ಬಲಗೊಳ್ಳುವ ಸಾಧ್ಯತೆ ಇದ್ದು, ಎರಡು–ಮೂರು ದಿನಗಳಲ್ಲಿ ಅದು ರಾಜ್ಯಕ್ಕೆ ಮಳೆ ತರಲಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.

‘ಬುಧವಾರ ಕರಾವಳಿಯಲ್ಲಿ ಅಲ್ಲಲ್ಲಿ ಸಣ್ಣದಾಗಿ ಮಳೆಯಾಗಿದೆ. ಆದರೂ, ಕೇರಳ ಭಾಗದಿಂದ ಮಳೆ ಬಲಿಷ್ಠವಾಗುವ ಸಾಧ್ಯತೆ ಕಡಿಮೆ. ಬಂಗಾಳ ಕೊಲ್ಲಿಯಲ್ಲಿ ಆಗಿರುವ ವಾಯುಭಾರ ಕುಸಿತ ಬಲಗೊಂಡರೆ ಈ ಭಾಗದ ಮೋಡಗಳನ್ನು ತನ್ನತ್ತ ಸೆಳೆದುಕೊಳ್ಳಲಿದೆ. ಆಗ ರಾಜ್ಯದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ’ ಎಂದುರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಸಂಸ್ಥೆಯ ನಿರ್ದೇಶಕ ಜಿ.ಎಸ್. ಶ್ರೀನಿವಾಸ ರೆಡ್ಡಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT