ಭಾನುವಾರ, ಮಾರ್ಚ್ 29, 2020
19 °C

ಮಳೆ; ರಸ್ತೆ, ಮನೆಗಳಿಗೆ ನುಗ್ಗಿದ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ದೊಡ್ಡನೆಕ್ಕುಂದಿ ವಾರ್ಡ್‌ನ ಕುಂದಲಹಳ್ಳಿ ಗ್ರಾಮದ ಅನೇಕ ಮನೆಗಳಿಗೆ ನೀರು ನುಗ್ಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಎರಡು ದಿನಗಳಿಂದ ನಗರದಲ್ಲಿ ವರ್ಷಧಾರೆ ಆಗುತ್ತಿದೆ. ಮಲ್ಲೇಶ್ವರ, ಕೆ.ಆರ್‌.ಪುರ, ಮಾರತ್ತಹಳ್ಳಿ, ಕಾರ್ಪೊರೇಷನ್‌, ಹಲಸೂರು ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಆಗಿದೆ.

ಕುಂದಲಹಳ್ಳಿಯ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ಮನೆಯ ಒಳಗಿದ್ದ ವಸ್ತುಗಳು ನೀರಿನಲ್ಲಿ ಕೊಚ್ಚಿಹೋಗಿವೆ. ಇದರಿಂದಾಗಿ ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸಿದರು.

ಹಲಸೂರು ಕೆರೆ ಬಳಿ, ಹಳೆ ಮದ್ರಾಸ್‌ ರಸ್ತೆ, ವಿಕ್ಟೋರಿಯಾ ರಸ್ತೆ, ಹಳೆ ರೇಸ್‌ಕೋರ್ಸ್‌ ರಸ್ತೆ, ಮಡಿವಾಳ, ಸಿಲ್ಕ್‌ ಬೋರ್ಡ್‌, ಕೋರಮಂಗಲದಲ್ಲಿ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರಿಗೆ ತೊಂದರೆ ಉಂಟಾಗಿದೆ. ಲಿ ಮೆರಿಡಿಯನ್ ಬಳಿಯ ಅಂಡರ್ ಪಾಸ್ ಸೇರಿದಂತೆ ವಿವಿಧ ಅಂಡರ್ ಪಾಸ್‌ಗಳ ಮೇಲೆ ನೀರು ನಿಂತು ಸಂಚಾರ ದಟ್ಟಣೆ ಉಂಟಾಯಿತು. ಸೋಮವಾರ ತಡರಾತ್ರಿ ಸುರಿದ ಮಳೆಗೆ ಜೋಗುಪಾಳ್ಯ, ಸುಬ್ರಮಣ್ಯಪುರ ಹಾಗೂ ವಿವೇಕನಗರದಲ್ಲಿ ತಲಾ ಒಂದು ಮರ ನೆಲಕ್ಕುರುಳಿವೆ. ವಿವೇಕ ನಗರದಲ್ಲಿ ಒಂದು ಕಾರು ಮತ್ತು ಬೈಕ್ ಜಖಂಗೊಂಡಿವೆ ಎಂದು ಎಂದು ಬಿಬಿಎಂಪಿ ಸಹಾಯವಾಣಿ ಕೇಂದ್ರದ ಸಿಬ್ಬಂದಿ ಮಾಹಿತಿ ನೀಡಿದರು.

ಎಲ್ಲಿ, ಎಷ್ಟು ಮಳೆ?
ಕೆ.ಆರ್.ಪುರದಲ್ಲಿ 31.5 ಅತಿ ಹೆಚ್ಚು ಮಿ.ಮೀ ಮಳೆಯಾಗಿದೆ. ದೊಡ್ಡಜಾಲ 22.5 ಮಿ.ಮೀ, ರಾಮಮೂರ್ತಿ ನಗರ 19 ಮಿ.ಮೀ, ಹುಸ್ಕೂರು 11.5 ಮಿ.ಮೀ, ಬಾಣಸವಾಡಿ 9 ಮಿ.ಮೀ, ಸಂಪಂಗಿ ರಾಮನಗರ ಮಿ.ಮೀ, ದಾಸನಾಪುರ, ವರ್ತೂರಿನಲ್ಲಿ ತಲಾ 8.5 ಮಿ.ಮೀ, ಯಲಹಂಕ 8 ಮಿ.ಮೀ, ಬೂದಿಗೆರೆ 5 ಮಿ.ಮೀ, ಹೆಸರಘಟ್ಟ ಹಾಗೂ ರಾಜಾನುಕುಂಟೆಯಲ್ಲಿ ತಲಾ 3.5 ಮಿ.ಮೀ, ಮಳೆ ಆಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು