ಬುಧವಾರ, ಡಿಸೆಂಬರ್ 7, 2022
22 °C

ಬೆಂಗಳೂರಿನಲ್ಲಿ ಮಳೆ: ಇನ್ನೂ ಮೂರು ದಿನ ಮಳೆ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ದಿನವಿಡೀ ಜಿಟಿ ಜಿಟಿ ಮಳೆ ಸುರಿಯಿತು. ರಾತ್ರಿ ಮಳೆಯು ತುಸು ಬಿರುಸು ಪಡೆಯಿತು.

ವಾಯುಭಾರ ಕುಸಿತದ ಪರಿಣಾಮ ನಗರದಲ್ಲಿ ಚಳಿಯ ವಾತಾವರಣ ಇತ್ತು. ಉಷ್ಣಾಂಶ ಕುಸಿದಿದ್ದರಿಂದ ಪರಿಣಾಮ ಮೈಕೊರೆಯುವ ಚಳಿಯ ಅನುಭವ ಉಂಟಾಯಿತು.

ಶುಕ್ರವಾರ ರಾತ್ರಿಯಿಂದಲೇ ಜಿಟಿಜಿಟಿ ಮಳೆ ಸುರಿಯಲು ಆರಂಭವಾಗಿತ್ತು. ಅದು ಶನಿವಾರ ದಿನವಿಡೀ ಮುಂದುವರಿದಿತ್ತು.

ವಾತಾವರಣದಲ್ಲಿ ದಿಢೀರ್‌ ಬದಲಾವಣೆ ಕಂಡುಬಂಡಿದ್ದ ಕಾರಣ ವಾರಾಂತ್ಯವಾದ ಶನಿವಾರವೂ ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಜನರ ಓಡಾಟ ಕಡಿಮೆಯಿತ್ತು.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮಳೆಯಾಗುತ್ತಿದೆ. ಅದರ ಪರಿಣಾಮ ನಗರಕ್ಕೂ ತಟ್ಟಿದ್ದು ಮಳೆ ಸುರಿಯುತ್ತಿದೆ. ನಗರದಲ್ಲಿ ಇನ್ನೂ ಮೂರು ದಿನ ಇದೇರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜಧಾನಿಯಲ್ಲಿ ಶನಿವಾರ ಗರಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಠಾಂಶ 18 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಭಾನುವಾರ ನಗರದಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ಧಾರೆ.

ಮಲ್ಲೇಶ್ವರ, ಬ್ಯಾಟರಾಯನಪುರ, ಪೀಣ್ಯ ಕೈಗಾರಿಕಾ ವಲಯ, ಜಾಲಹಳ್ಳಿ, ಯಲಹಂಕ, ಕೆಂಗೇರಿ, ಕೆಂಗೇರಿ ಉಪನಗರ, ರಾಜಾಜಿನಗರ, ಹೆಬ್ಬಾಳ, ಸದಾಶಿವನಗರ, ವಿಜಯನಗರ, ರಾಜರಾಜೇಶ್ವರಿ ನಗರ, ಟಿ.ದಾಸರಹಳ್ಳಿ, ಸುಂಕದಕಟ್ಟೆ, ಯಶವಂತಪುರ, ಹೆಗ್ಗನಹಳ್ಳಿ, ಹೆಬ್ಬಾಳ, ರಾಜಗೋಪಾಲನಗರ, ಶ್ರೀರಾಮಪುರ, ಸುಬ್ರಹ್ಮಣ್ಯ ನಗರ, ಚಂದ್ರಲೇಔಟ್, ಕಲಾಸಿಪಾಳ್ಯ, ಚಾಮರಾಜಪೇಟೆ, ಉಪ್ಪಾರಪೇಟೆ, ಜೆ.ಜೆ.ನಗರ, ಮಾಗಡಿ ರಸ್ತೆ, ವಿಜಯನಗರ... ಹೀಗೆ ನಗರದ ಎಲ್ಲೆಡೆ ಜಿಟಿಜಿಟಿ ಮಳೆ ಸುರಿಯಿತು. ಎಲ್ಲೆಡೆಯೂ ಗಾಳಿ ಬೀಸುತ್ತಿದ್ದರಿಂದ ಚಳಿಯ ವಾತಾವರಣ ಇತ್ತು.  ಸ್ವೇಟರ್‌ ಹಾಗೂ ಟೋಪಿ ಧರಿಸಿ ಸಂಚರಿಸಿದರು. ಮಳೆಯಿಂದ ರಕ್ಷಣೆ ಪಡೆಯಲು ಕೊಡೆ ಹಿಡಿದು ಸಾಗಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು