ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿ: ಐದು ದಿನ ಧಾರಾಕಾರ ಮಳೆ ಸಾಧ್ಯತೆ

Last Updated 15 ಜುಲೈ 2020, 20:49 IST
ಅಕ್ಷರ ಗಾತ್ರ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 16ರಿಂದ 20ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಈ ಐದೂ ದಿನ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಎಚ್ಚರಿಕೆ: ಕರಾವಳಿಯಲ್ಲಿ ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಹಾಗೂ ಗರಿಷ್ಠ 3.4 ಮೀಟರ್‌ ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು.

ಮಳೆ, ಎಲ್ಲಿ ಎಷ್ಟು?: ಉತ್ತರ ಕನ್ನಡ ಜಿಲ್ಲೆಯ ಶಿರಾಲಿ ಹಾಗೂ ಕಲಬುರ್ಗಿ ಜಿಲ್ಲೆಯ ಸೇಡಂನಲ್ಲಿ ಗರಿಷ್ಠ 5 ಸೆಂ.ಮೀ ಮಳೆಯಾಗಿದೆ. ಕಾರವಾರ 4, ಅಂಕೋಲಾ, ಕಲಬುರ್ಗಿ, ಚಿಂಚೋಳಿ, ಆಳಂದ 3, ಕುಷ್ಟಗಿ 2, ಮಂಗಳೂರು, ಉಪ್ಪಿನಂಗಡಿ, ಮೂಡುಬಿದರೆ, ಭಟ್ಕಳ, ಕುಂದಾಪುರ, ಹಾವೇರಿ, ರಾಯಚೂರು, ಬೀದರ್, ಮಧುಗಿರಿ, ಭಾಗಮಂಡಲ ಹಾಗೂ ಗೌರಿಬಿದನೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT