ಬೆಂಗಳೂರು: ನಗರದಲ್ಲಿ ಮಂಗಳವಾರ ರಾತ್ರಿ ಜೋರಾದ ಮಳೆ ಸುರಿದಿದ್ದು, ಹಲವೆಡೆ ರಸ್ತೆ ಮೇಲೆಯೇ ನೀರು ಹರಿಯಿತು.

ಬೆಳಿಗ್ಗೆಯಿಂದ ನಗರದಲ್ಲಿ ಬಿಸಿಲು ಇತ್ತು. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಕಂಡುಬಂತು. ಸಂಜೆ ವೇಳೆಯಲ್ಲಿ ಜಿಟಿ ಜಿಟಿಯಾಗಿ ಮಳೆ ಸುರಿಯಿತು. ರಾತ್ರಿ 9ರ ನಂತರ ಹಲವೆಡೆ ಜೋರಾದ ಮಳೆಯಾಯಿತು.

ಮೈಸೂರು ರಸ್ತೆಯ ನಾಯಂಡಹಳ್ಳಿ, ದೀಪಾಂಜಲಿನಗರ, ಗಿರಿನಗರ, ಹನುಮಂತನಗರ, ಬಸವನಗುಡಿ, ಜಯನಗರ, ರಾಜಾಜಿನಗರ, ವಿಜಯನಗರ, ಯಶವಂತಪುರ, ಪೀಣ್ಯ, ವಿದ್ಯಾರಣ್ಯಪುರ, ಹೆಬ್ಬಾಳ ಹಾಗೂ ಸುತ್ತಮುತ್ತ ಮಳೆ ಆಯಿತು. ಗಾಳಿಯೂ ಜೋರಾಗಿತ್ತು.

ನಾಯಂಡಹಳ್ಳಿ ಸಿಗ್ನಲ್ ಬಳಿ ರಸ್ತೆಯಲ್ಲೇ ಎರಡು ಅಡಿಯಷ್ಟು ನೀರು ಹರಿಯಿತು. ಅದರಿಂದಾಗಿ ಸಿಗ್ನಲ್ ಹಾಗೂ ಸುತ್ತಮುತ್ತ ವಾಹನಗಳ ಸಂಚಾರ ನಿಧಾನಗತಿಯಲ್ಲಿತ್ತು. ದಟ್ಟಣೆಯೂ ಕಂಡುಬಂತು. ಮಡಿವಾಳ, ಪೀಣ್ಯದಲ್ಲೂ ವಾಹನಗಳ ಓಡಾಟ ನಿಧಾನಗತಿಯಲ್ಲಿತ್ತು.

ಮಳೆಯಿಂದಾಗಿ ರಸ್ತೆಯಲ್ಲಿ ಸಿಲುಕಿದ್ದ ಸಾರ್ವಜನಿಕರು, ಅಂಗಡಿಗಳು ಹಾಗೂ ಸೇತುವೆಗಳಡಿಯಲ್ಲಿ ಆಶ್ರಯ ಪಡೆದರು. ಕೆಲವು ರಸ್ತೆಗಳಲ್ಲಿ ಹರಿಯುತ್ತಿದ್ದ ನೀರಿನಲ್ಲೇ ಚಾಲಕರು ವಾಹನಗಳನ್ನು ಚಲಾಯಿಸಿಕೊಂಡು ಹೋದರು.

ಪ್ರಮುಖ ರಸ್ತೆಗಳ ಅಕ್ಕ–ಪಕ್ಕದಲ್ಲೇ ಬೈಕ್‌ಗಳನ್ನು ನಿಲ್ಲಿಸಿ ಸವಾರರು ಅಂಗಡಿಗಳ ಒಳಗೆ ನಿಂತುಕೊಂಡಿದ್ದು ಕಂಡುಬಂತು.

‘ನಗರದಲ್ಲಿ ಉತ್ತಮ ಮಳೆ ಆಗಿದೆ. ಹಾನಿ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.