ಭಾನುವಾರ, ಮಾರ್ಚ್ 7, 2021
27 °C

ಮಳೆ ಅಬ್ಬರ: ಅನರ್ಹರ ಆರು ಕ್ಷೇತ್ರಗಳು ಅನಾಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅನರ್ಹರಾಗಿರುವ 17 ಶಾಸಕರ ಪೈಕಿ ಆರು ಕ್ಷೇತ್ರಗಳಲ್ಲಿ ಅತಿವೃಷ್ಟಿ ತೀವ್ರ ಸ್ವರೂಪ ಪಡೆದು ಕೊಂಡಿದ್ದು, ಅಲ್ಲಿನ ಜನರ ಸಮಸ್ಯೆ ಕೇಳಲು, ಪರಿಹಾರ ಕಾರ್ಯಗಳ ಉಸ್ತುವಾರಿ ನೋಡಿಕೊಳ್ಳಲು ಜನಪ್ರತಿನಿಧಿಗಳೇ ಇಲ್ಲದಂತಾಗಿದೆ.

ಸದಸ್ಯತ್ವದಿಂದ ಅನರ್ಹಗೊಂಡಿರುವುದರಿಂದ ಕ್ಷೇತ್ರಗಳಲ್ಲಿ ಅಧಿಕಾರಿಗಳ ಸಭೆ ನಡೆಸಲು, ಯಾವುದೇ ಸಲಹೆ, ಸೂಚನೆ ನೀಡಲು ಸಾಧ್ಯವಾಗುತ್ತಿಲ್ಲ. ಕ್ಷೇತ್ರದ ಶಾಸಕರಲ್ಲ ಎಂಬ ಕಾರಣಕ್ಕೆ, ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗುತ್ತಿದೆ.
ಮಳೆ ಅನಾಹುತದಿಂದ ತತ್ತರಿಸಿರುವ ಕ್ಷೇತ್ರಗಳ ಕಡೆ ಗಮನ ಹರಿಸಲು ಸಚಿವರಿಲ್ಲ, ಶಾಸಕರೂ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಜನರು ಪರಿಹಾರಕ್ಕಾಗಿ ಪರಿತಪಿಸುವುದು ಮಾತ್ರ ತಪ್ಪಿಲ್ಲ.

ಬೆಳಗಾವಿ ಜಿಲ್ಲೆಯಲ್ಲೇ ಅನರ್ಹರ ಮೂರು ಕ್ಷೇತ್ರಗಳು ಬರಲಿದ್ದು, ಇವು ತೀವ್ರ ಸ್ವರೂಪದ ನೆರೆಗೆ ತುತ್ತಾಗಿವೆ. ಕಾಗವಾಡ ಕ್ಷೇತ್ರದ ಶ್ರೀಮಂತ ಪಾಟೀಲ ಈವರೆಗೂ ಕ್ಷೇತ್ರಕ್ಕೆ ಕಾಲಿಟ್ಟಿಲ್ಲ. ಎಲ್ಲಿದ್ದಾರೆ ಎಂಬ ಮಾಹಿತಿಯೂ ಜನತೆಗೆ ಇಲ್ಲ ವಾಗಿದೆ. ಈ ಭಾಗದಲ್ಲಿ ಸಾಕಷ್ಟು ಮನೆಗಳು ನೀರಿನಲ್ಲಿ ಮುಳುಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಗೋಕಾಕ ಕ್ಷೇತ್ರದ ರಮೇಶ್ ಜಾರಕಿಹೊಳಿ ಎರಡು ದಿನಗಳ ಹಿಂದೆ ಕ್ಷೇತ್ರಕ್ಕೆ ಬಂದಿದ್ದು, ಕೆಲವೆಡೆ ನಿರಾಶ್ರಿತರನ್ನು ಭೇಟಿ ಮಾಡಿದ್ದಾರೆ. ಅಥಣಿ ಕ್ಷೇತ್ರದ ಮಹೇಶ್ ಕುಮಠಳ್ಳಿ ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡುವಷ್ಟಕ್ಕೇ ಸೀಮಿತರಾಗಿದ್ದಾರೆ. ಈ ಎರಡೂ ಕ್ಷೇತ್ರ ಗಳಲ್ಲೂ ನೆರೆ ತೀವ್ರ ಸ್ವರೂಪ ಪಡೆದಿದೆ.

ಹಾವೇರಿ ಜಿಲ್ಲೆ ಹಿರೇಕೆರೂರ ಕ್ಷೇತ್ರದಲ್ಲಿ ಬಿ.ಸಿ.ಪಾಟೀಲ, ರಾಣೆಬೆನ್ನೂರು ಕ್ಷೇತ್ರದಲ್ಲಿ ಆರ್.ಶಂಕರ್ ವಾಸ್ತವ್ಯ ಹೂಡಿದ್ದಾರೆ. ಆದರೆ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಕ್ಷೇತ್ರದ ಶಿವರಾಮ್ ಹೆಬ್ಬಾರ ಕ್ಷೇತ್ರದಲ್ಲೇ ಇದ್ದು, ಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು