ಬೆಂಗಳೂರು: ‘ನಗರದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಬೀಳುವ ಸಾಧ್ಯತೆ ಇದೆ. ಯಾವುದೇ ರೀತಿಯ ಅನಾಹುತಗಳನ್ನು ತಡೆಯಲು ಬಿಬಿಎಂಪಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.

‘ಈಗಾಗಲೇ ಎಲ್ಲ ವಲಯಗಳಲ್ಲಿನ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ವಲಯ ಮತ್ತು ವಿಭಾಗ ಮಟ್ಟದಲ್ಲಿ ಹಾಗೂ ಕೇಂದ್ರ ಕಚೇರಿಯಲ್ಲಿರುವ ತಂಡಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ಹಲವಾರು ಸ್ಥಳಗಳಲ್ಲಿ ಮರಗಳು ಬೀಳುವುದನ್ನು ಪತ್ತೆ ಮಾಡಲಾಗಿದೆ. ಭಾನುವಾರ ರಾತ್ರಿ ಉತ್ತರಹಳ್ಳಿಯಲ್ಲಿ ಭಾರಿ ಮಳೆಯಿಂದ ರಾಜಕಾಲುವೆಯಲ್ಲಿ ನೀರು ಮನೆಗಳಿಗೆ ನುಗ್ಗಿತ್ತು. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಮುಖ್ಯ ಎಂಜಿನಿಯರ್‌ಗಳಿಗೆ ಸೂಚಿಸಲಾಗಿದೆ’ ಎಂದು ಸೋಮವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.