ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ತಗ್ಗಿದ್ದ ಮಳೆ; ಇಂದು ಅಬ್ಬರಿಸುವ ಸಾಧ್ಯತೆ

Last Updated 23 ಅಕ್ಟೋಬರ್ 2021, 6:18 IST
ಅಕ್ಷರ ಗಾತ್ರ

ಬೆಂಗಳೂರು:‘ತಮಿಳುನಾಡಿನ ಕರಾವಳಿ ಪ್ರದೇಶದಲ್ಲಿ ಉಂಟಾಗಿದ್ದ ಮೇಲ್ಮೈ ಸುಳಿಗಾಳಿ ದೂರ ಸರಿದಿರುವುದರಿಂದ ಬೆಂಗಳೂರು ನಗರ ಭಾಗದಲ್ಲಿ ಎರಡು ದಿನಗಳಿಂದ ಮಳೆ ತಗ್ಗಿದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ಕಳೆದ ವಾರ ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಸಂಭವಿಸಿದ್ದರಿಂದ ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿತ್ತು. ಸೂಚನೆಯಂತೆ ಬೆಂಗಳೂರಿಗೆ ‘ಯೆಲ್ಲೊ ಅಲರ್ಟ್‌’ ಕೂಡ ಘೋಷಿಸಲಾಗಿತ್ತು. ಆದರೆ, ಮೇಲ್ಮೈ ಸುಳಿಗಾಳಿ ತಮಿಳುನಾಡು ಕರಾವಳಿಯಿಂದ ದೂರ ಸರಿದಿದೆ. ಹಾಗಾಗಿ, ಬೆಂಗಳೂರಿನಲ್ಲಿ ಎರಡು ದಿನಗಳಿಂದ ಮಳೆ ದಿಢೀರ್‌ ತಗ್ಗಿದೆ’ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ತಿಳಿಸಿದರು.

‘ಈಗ ವಾಯುಭಾರ ಕುಸಿತದ ವಿಸ್ತೃತ ಭಾಗ ಮುಂದುವರಿದಿರುವುದರಿಂದ ಬೆಂಗಳೂರಿನಲ್ಲಿ ಶನಿವಾರ (ಅ.23) ಮತ್ತೆ ಭಾರಿ ಮಳೆಯಾಗುವ ಮುನ್ಸೂಚನೆಗಳು ಕಂಡು ಬಂದಿವೆ. ಭಾನುವಾರದಿಂದ ಮಳೆ ಪ್ರಮಾಣ ಮತ್ತೆ ಕಡಿಮೆಯಾಗುವ ಸಾಧ್ಯತೆಗಳೂ ಇವೆ’ ಎಂದು ವಿವರಿಸಿದರು.

‘ಗುಡುಗು, ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಬೆಂಗಳೂರಿನಲ್ಲಿ ಶನಿವಾರ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. ಹವಾಮಾನ ವೈಪರೀತ್ಯದಿಂದ ಮಳೆ ಏರುಪೇರಾಗಬಹುದು’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT