ಶುಕ್ರವಾರ, ಜೂನ್ 5, 2020
27 °C

ಸಾಧಾರಣ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಗುರುವಾರ ಮೋಡ ಕವಿದ ವಾತಾವರಣವಿತ್ತು. ಆಗಾಗ ಬಿಸಿಲು ಕಾಣಿಸಿಕೊಂಡಿತು. ಸಂಜೆ ವೇಳೆ ಕೆಲವೆಡೆ ಸಾಧಾರಣ ಮಳೆಯೂ ಸುರಿಯಿತು.

ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ, ಬಸವೇಶ್ವರನಗರ ಹಾಗೂ ಸುತ್ತಮುತ್ತಲ ಸ್ಥಳಗಳಲ್ಲಿ ಮಳೆ ಆಯಿತು. ಜೋರಾಗಿ ಗಾಳಿಯೂ ಬಿಸಿ ಜನರಿಗೆ ತಂಪಿನ ಅನುಭವ ನೀಡಿತು.

ಬನಶಂಕರಿ, ಕೆಂಗೇರಿ, ಆರ್‌.ಟಿ.ನಗರ, ಸಂಜಯನಗರ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಕೆಲವು ಕಡೆ ಸ್ವಲ್ಪ ಪ್ರಮಾಣದಲ್ಲಿ ಮಳೆ ಹನಿಗಳು ಬಿದ್ದವು.

‘ಎರಡು ದಿನದಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಹಾನಿ ಬಗ್ಗೆ ದೂರುಗಳೂ ಬಂದಿಲ್ಲ’
ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು