ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಕೆಲವೆಡೆ ಬಿರುಸಿನ ಮಳೆ

Published 8 ಮೇ 2024, 15:14 IST
Last Updated 8 ಮೇ 2024, 15:14 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ವಿವಿಧ ಪ್ರದೇಶಗಳಲ್ಲಿ ಬುಧವಾರ ಸಂಜೆ ಬಿರುಸಿನ ಮಳೆಯಾಗಿದ್ದು, ರಾಜರಾಜೇಶ್ವರಿ ನಗರ ವಲಯದ ದೊಡ್ಡಬಿದಿರುಕಲ್ಲು ವ್ಯಾಪ್ತಿಯಲ್ಲಿ 6.6 ಸೆಂ.ಮೀನಷ್ಟು ಮಳೆಯಾದ ವರದಿಯಾಗಿದೆ.

ನಗರದಾದ್ಯಂತ ಮಧ್ಯಾಹ್ನದವರೆಗೂ ಬಿರುಬಿಸಿಲಿತ್ತು. ನಾಲ್ಕೂವರೆ ಗಂಟೆ ಸುಮಾರಿಗೆ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿತು. ಸಂಜೆ 5.30ಯಿಂದ ಮಳೆ ಆರಂಭವಾಯಿತು. ಎಂ.ಜಿ.ರಸ್ತೆ, ರಾಜ್‌ಮಹಲ್ ಗುಟ್ಟಹಳ್ಳಿ, ಉತ್ತರಹಳ್ಳಿ, ಕೆಂಗೇರಿ, ರಾಜರಾಜೇಶ್ವರಿ ನಗರ, ಬಾಣಸವಾಡಿ ಭಾಗದಲ್ಲಿ ಉತ್ತಮ ಮಳೆಯಾಗಿದೆ.

ರಾಜರಾಜೇಶ್ವರಿ ನಗರ ಮತ್ತು ನಾಯಂಡಹಳ್ಳಿಯಲ್ಲಿ ತಲಾ 5.1ಮೀ, ಮಾರುತಿ ಮಂದಿರ 4.2 ಸೆಂ.ಮೀ ಮಳೆಯಾಗಿದೆ. ವಿದ್ಯಾಪೀಠ, ಪುಲಕೇಶಿನಗರ, ವಿಶ್ವನಾಥ ನಾಗೇನಹಳ್ಳಿ ವ್ಯಾಪ್ತಿಯಲ್ಲಿ 3 ಸೆಂ.ಮೀಗೂ ಹೆಚ್ಚು ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT